ಪ್ರಗತಿವಾಹಿನಿ ಸುದ್ದಿ; ಮಂಗಳೂರು: ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳ ತಂಡ ಮಂಗಳೂರಿನ ಪಿ.ಎ.ಇಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ ನಡೆಸಿದ್ದು, ಓರ್ವ ಬಿಇ ವಿದ್ಯಾರ್ಥಿಯನ್ನು ವಶಕ್ಕೆ ಪಡೆದಿದೆ.
ಇತೀಚೆಗೆ ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ಎನ್ ಐ ಎ ಅಧಿಕಾರಿಗಳು ಚುರುಕುಗೊಳಿಸಿದ್ದು, ಶಂಕಿತ ಉಗ್ರ ಶಾರಿಕ್ ವಿಚಾರಣೆ ನಡೆಸಿದ ಬಳಿಕ ಇದೀಗ ಮಂಗಳೂರಿನ ಪಿ.ಎ.ಇಂಜಿನಿಯರಿಂಗ್ ಕಾಲೇಜಿನ ಮೇಲೆ ದಾಳಿ ನಡೆಸಿದ್ದಾರೆ.
ಬೆಂಗಳೂರಿನಿಂದ ಆಗಮಿಸಿರುವ 7 ಅಧಿಕಾರಿಗಳು ಕಾಲೇಜಿನ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಓರ್ವ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಬಂಧಿತ ಶಂಕಿತ ಉಗ್ರ ಮಾಜ್ ಮುನೀರ್ ಕೂಡ ಇದೇ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ಎಂದು ತಿಳಿದುಬಂದಿದೆ. ಟ್ರಯಲ್ ಬ್ಲಾಸ್ಟ್ ಪ್ರಕರಣದಲ್ಲಿ ಶಿವಮೊಗ್ಗ ಪೊಲೀಸರು ಮಾಜ್ ಮುನೀರ್ ನನ್ನು ಬಂಧಿಸಿದ್ದರು. ಸಧ್ಯ ಈ ಪ್ರಕರಣವನ್ನು ಕೂಡ ಎನ್ ಐ ಎ ಅಧಿಕಾರಿಗಳು ತನಿಖೆ ನಡೆಸಿದ್ದಾರೆ.
*40% ಕಮಿಷನ್ ಗೆ ಈ ದುಡ್ಡೇ ದಾಖಲೆಯಲ್ಲವೇ?; ಡಿ.ಕೆ.ಶಿವಕುಮಾರ್ ಪ್ರಶ್ನೆ*
https://pragati.taskdun.com/vidhanasoudha10-5-lakh-money-foundd-k-shivakumarreaction/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ