Belagavi NewsBelgaum NewsKannada NewsKarnataka NewsLatest

*ಯಮಕನಮರಡಿ ಕ್ಷೇತ್ರಕ್ಕೆ ಮತ್ತೊಂದು ಸರ್ಕಾರಿ ಮೂಲಸೌಕರ್ಯ*: *ಪಾಚ್ಚಾಪುರದಲ್ಲಿ ₹5 ಕೋಟಿ ವೆಚ್ಚದ ಐಬಿ ಕಟ್ಟಡ ನಿರ್ಮಾಣ*

ಪ್ರಗತಿವಾಹಿನಿ: ಯಮಕನಮರಡಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ಹೊಸ ಆಯಾಮ ನೀಡುವ ನಿಟ್ಟಿನಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ವಿಶೇಷ ಕಾಳಜಿ, ದೂರದೃಷ್ಟಿ ಹಾಗೂ ಅಭಿವೃದ್ಧಿಯ ಇಚ್ಛಾಶಕ್ತಿಯ ಫಲವಾಗಿ ಹುಕ್ಕೇರಿ ತಾಲ್ಲೂಕಿನ ಪಾಚ್ಚಾಪುರ ಗ್ರಾಮದಲ್ಲಿ 5 ಕೋಟಿ ರೂ. ವೆಚ್ಚದ ಸುಸಜ್ಜಿತ ಐಬಿ ಕಟ್ಟಡ ನಿರ್ಮಾಣಗೊಂಡಿದೆ.

ಹೌದು, ಗ್ರಾಮೀಣ ಪ್ರದೇಶಗಳಲ್ಲಿಯೂ ಉನ್ನತ ಮಟ್ಟದ ಸರ್ಕಾರಿ ಮೂಲಸೌಕರ್ಯಗಳನ್ನು ಕಲ್ಪಿಸುವ ಸಚಿವರ ಅಭಿವೃದ್ಧಿ ಕಾರ್ಯಕ್ಕೆ ಈ ಕಟ್ಟಡ ಮತ್ತೊಂದು ಮಹತ್ವದ ಸೇರ್ಪಡೆಯಾಗಿದೆ. ಕ್ಷೇತ್ರದ ಅಭಿವೃದ್ಧಿ ಎಂದರೆ ಕೇವಲ ರಸ್ತೆ, ಸೇತುವೆ ಹಾಗೂ ಇತರ ಕಾಮಗಾರಿಗಳಿಗೆ ಸೀಮಿತವಾಗದೆ, ಸರ್ಕಾರಿ ಆಡಳಿತ ವ್ಯವಸ್ಥೆ ಸುಗಮವಾಗಿ ಕಾರ್ಯನಿರ್ವಹಿಸಲು ಅಗತ್ಯವಿರುವ ಮೂಲಸೌಕರ್ಯಗಳನ್ನೂ ಗ್ರಾಮೀಣ ಭಾಗಗಳಲ್ಲಿ ಕಲ್ಪಿಸುವುದಾಗಿದೆ. ಈ ದೂರದೃಷ್ಟಿಯೊಂದಿಗೆ ಸಚಿವ ಸತೀಶ್ ಜಾರಕಿಹೊಳಿ ಅವರು ಪಾಚ್ಚಾಪುರದಲ್ಲಿ ಸುಸಜ್ಜಿತ ಐಬಿ ಕಟ್ಟಡ ನಿರ್ಮಾಣಕ್ಕೆ ಆದ್ಯತೆ ನೀಡಿದ್ದು, ಇದೀಗ ಈ ಭಾಗಕ್ಕೆ ಉತ್ತಮ ಸರ್ಕಾರಿ ಮೂಲಸೌಕರ್ಯ ಒದಗಿಸಿದಂತಾಗಿದೆ.

ಗ್ರಾಮೀಣ ಭಾಗದಲ್ಲಿ ಸುಸಜ್ಜಿತ ಸರ್ಕಾರಿ ಸೌಲಭ್ಯ: ಸಾಮಾನ್ಯವಾಗಿ ಸರ್ಕಾರಿ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಉನ್ನತ ಮಟ್ಟದ ಅಧಿಕಾರಿಗಳು ಕ್ಷೇತ್ರ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ವಾಸ್ತವ್ಯ, ಸಭೆ ಹಾಗೂ ಅಧಿಕೃತ ಕಾರ್ಯಚಟುವಟಿಕೆಗಳಿಗೆ ಸೂಕ್ತ ವ್ಯವಸ್ಥೆ ಅಗತ್ಯವಾಗಿರುತ್ತದೆ. ಇಂತಹ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಪಾಚ್ಚಾಪುರದಲ್ಲಿ ಐಬಿ ಕಟ್ಟಡ ನಿರ್ಮಿಸಲಾಗಿದೆ.

ಸುಸಜ್ಜಿತ ಸೌಲಭ್ಯಗಳನ್ನು ಒಳಗೊಂಡಿರುವ ಈ ಕಟ್ಟಡವು ಅಧಿಕಾರಿಗಳು ಹಾಗೂ ಗಣ್ಯರ ವಾಸ್ತವ್ಯಕ್ಕೆ ಅನುಕೂಲ ಕಲ್ಪಿಸುವುದರ ಜತೆಗೆ, ಸರ್ಕಾರಿ ಕಾರ್ಯಚಟುವಟಿಕೆಗಳಿಗೆ ಅಗತ್ಯವಾದ ಮೂಲಸೌಕರ್ಯ ಒದಗಿಸಲಿದೆ. ಗ್ರಾಮೀಣ ಪ್ರದೇಶದಲ್ಲಿಯೇ ಇಂತಹ ಕಟ್ಟಡ ನಿರ್ಮಾಣವಾಗಿರುವುದು ಸ್ಥಳೀಯ ಮೂಲಸೌಕರ್ಯ ಅಭಿವೃದ್ಧಿಗೆ ಹೊಸ ಆಯಾಮ ನೀಡಿದೆ.

5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ: ಲೋಕೋಪಯೋಗಿ ಇಲಾಖೆಯ ಹುಕ್ಕೇರಿ ಉಪವಿಭಾಗದ ವತಿಯಿಂದ ಇಲಾಖೆಯ ಲೆಕ್ಕ ಶೀರ್ಷಿಕೆ 4059ರ ಅಡಿಯಲ್ಲಿ ಅಂದಾಜು ₹5 ಕೋಟಿ ವೆಚ್ಚದಲ್ಲಿ ಈ ಐಬಿ ಕಟ್ಟಡ ನಿರ್ಮಿಸಲಾಗಿದೆ. ಸರ್ಕಾರಿ ಕಟ್ಟಡಗಳ ನಿರ್ಮಾಣದ ಮೂಲಕ ಗ್ರಾಮೀಣ ಭಾಗದಲ್ಲಿಯೂ ಆಡಳಿತಾತ್ಮಕ ಸೌಲಭ್ಯಗಳನ್ನು ವಿಸ್ತರಿಸುವ ಉದ್ದೇಶ ಈ ಯೋಜನೆಯಲ್ಲಿದೆ. ಪಾಚ್ಚಾಪುರದಲ್ಲಿ ನಿರ್ಮಾಣಗೊಂಡಿರುವ ಈ ಕಟ್ಟಡವು ಹುಕ್ಕೇರಿ ತಾಲ್ಲೂಕಿನ ಪ್ರಮುಖ ಸರ್ಕಾರಿ ಮೂಲಸೌಕರ್ಯಗಳಲ್ಲಿ ಒಂದಾಗಿ ಗುರುತಿಸಿಕೊಳ್ಳಲಿದೆ.

ಯಮಕನಮರಡಿ ಕ್ಷೇತ್ರದ ಅಭಿವೃದ್ಧಿಗೆ ಮತ್ತೊಂದು ಹೆಗ್ಗುರುತು: ಸಚಿವ ಸತೀಶ್ ಜಾರಕಿಹೊಳಿ ಅವರ ಅಭಿವೃದ್ಧಿ ಸಂಕಲ್ಪದ ಫಲವಾಗಿ ಪಾಚ್ಚಾಪುರದಲ್ಲಿ ನಿರ್ಮಾಣಗೊಂಡಿರುವ ಐಬಿ ಕಟ್ಟಡವು ಕೇವಲ ಒಂದು ಸರ್ಕಾರಿ ಕಟ್ಟಡವಲ್ಲ; ಗ್ರಾಮೀಣ ಪ್ರದೇಶಗಳಲ್ಲಿಯೂ ಸುಸಜ್ಜಿತ ಆಡಳಿತಾತ್ಮಕ ಮೂಲಸೌಕರ್ಯ ಕಲ್ಪಿಸುವ ದೂರದೃಷ್ಟಿಯ ಪ್ರತಿಬಿಂಬವಾಗಿದೆ. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡುತ್ತಾ, ಅಗತ್ಯವಿರುವ ಮೂಲಸೌಕರ್ಯಗಳನ್ನು ಹಂತ ಹಂತವಾಗಿ ಕಲ್ಪಿಸುತ್ತಿರುವ ಸಚಿವರ ಕಾರ್ಯವೈಖರಿಗೆ ಈ ಕಟ್ಟಡ ಮತ್ತೊಂದು ಸಾಕ್ಷಿಯಾಗಿದೆ. ₹5 ಕೋಟಿ ವೆಚ್ಚದ ಈ ಐಬಿ ಕಟ್ಟಡದಿಂದ ಪಾಚ್ಚಾಪುರ ಗ್ರಾಮಕ್ಕೂ ವಿಶೇಷ ಗುರುತು ದೊರೆತಿದ್ದು, ಯಮಕನಮರಡಿ ಕ್ಷೇತ್ರದ ಅಭಿವೃದ್ಧಿ ಪಯಣದಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ಸೇರ್ಪಡೆಯಾಗಿದೆ.

ಯಮಕನಮರಡಿ ಕ್ಷೇತ್ರದ ಸಮಗ್ರ ಅಭಿವೃದ್ಧಿ ನನ್ನ ಪ್ರಮುಖ ಗುರಿಯಾಗಿದೆ. ಅಭಿವೃದ್ಧಿ ಕಾರ್ಯಗಳು ನಗರ ಪ್ರದೇಶಗಳಿಗೆ ಮಾತ್ರ ಸೀಮಿತವಾಗದೆ, ಗ್ರಾಮೀಣ ಭಾಗಗಳಿಗೂ ಗುಣಮಟ್ಟದ ಮೂಲಸೌಕರ್ಯ ಹಾಗೂ ಸಾರ್ವಜನಿಕ ಸೌಲಭ್ಯಗಳು ತಲುಪಬೇಕು ಎಂಬ ಉದ್ದೇಶದಿಂದ ರಸ್ತೆ, ಸೇತುವೆ ಮತ್ತು ಸರ್ಕಾರಿ ಕಟ್ಟಡಗಳ ನಿರ್ಮಾಣಕ್ಕೆ ಆದ್ಯತೆ ನೀಡುತ್ತಿದ್ದೇನೆ. ಈ ನಿಟ್ಟಿನಲ್ಲಿ ಪಾಚ್ಚಾಪುರ ಗ್ರಾಮದಲ್ಲಿ ₹5 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಐಬಿ ಕಟ್ಟಡ ನಿರ್ಮಿಸಲಾಗಿದೆ. ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಅಗತ್ಯ ಮೂಲಸೌಕರ್ಯ ಕಲ್ಪಿಸಿ, ಜನರ ಜೀವನಮಟ್ಟ ಸುಧಾರಿಸುವ ಶಾಶ್ವತ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದು ನನ್ನ ಆಶಯವಾಗಿದೆ.

  • ಸತೀಶ್ ಜಾರಕಿಹೊಳಿ, ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು.

Related Articles

Back to top button