Karnataka News

*ಧರ್ಮಸ್ಥಳಕ್ಕೆ ಪಾದಯಾತ್ರೆ ತೆರಳುತ್ತಿದ್ದ ವೇಳೆ ದುರಂತ: ಬಸ್ ಹರಿದು ಇಬ್ಬರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಧರ್ಮಸ್ಥಳಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮೇಲೆ ಬಸ್ ಹರಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಕೆಂಚಟ್ಟಹಳ್ಳಿ ಬಳಿ ನಡೆದಿದೆ.

ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ ತೆರಳುತ್ತಿದ್ದರು. ಈ ವೇಳೆ ಏಕಾಏಕಿ ಬಂದ ಬಸ್ ಯಾತ್ರಿಕರ ಮೇಲೆ ಹರಿದಿದೆ. ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಓರ್ವನ ಸ್ಥಿತಿ ಗಂಭೀರವಾಗಿದೆ.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಅನಗೋಳು ಗ್ರಾಮದ ಸುರೇಶ್ (60) ಕುಮಾರ್ (55) ಮೃತ ದುರ್ದೈವಿಗಳು. ಗಾಯಾಳು ದಿನೇಶ್ ಅವರನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button