ಪ್ರಗತಿವಾಹಿನಿ ಸುದ್ದಿ, ನವದೆಹಲಿ : ದೇಶದ 106 ಜನರಿಗೆ ಪದ್ಮ ಪ್ರಶಸ್ತಿ ಪ್ರಕಟಿಸಲಾಗಿದ್ದು, ಕರ್ನಾಟಕದ 8 ಜನರು ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಮಾಜಿ ಮುಖ್ಯಮಂತ್ರಿಯೂ ಆಗಿರುವ ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರಿಗೆ ಪದ್ಮ ವಿಭೂಷಣ ಘೋಷಿಸಲಾಗಿದೆ. ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತಿ ಹಾಗೂ ಸಾಹಿತಿ ಎಸ್.ಎಲ್.ಭೈರಪ್ಪ ಅವರಿಗೆ ಪದ್ಮ ಭೂಷಣ ನೀಡಲಾಗಿದೆ.
ಕೊಡಗಿನ ಜಾನಪದ ನರ್ತಕಿ ರಾಣಿ ಮಾಚಯ್ಯ, ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಭಾಗದಲ್ಲಿ ಖಾದರ್ ವಲ್ಲಿ ದೂದೇಕುಲ, ಕಲೆ ವಿಭಾಗದಲ್ಲಿ ತಮಟೆಯ ತಂದೆ ಎಂದು ಪ್ರಖ್ಯಾತರಾದ ನಾಡೋಜ ಪಿಂಡಿಪಾಪನಹಳ್ಳಿ ಮುನಿ ವೆಂಕಟಪ್ಪ ಮತ್ತು ಐ ಶಾ ರಶೀದ್ ಅಹಮದ್ ಕ್ವಾದ್ರಿ, ಪುರಾತತ್ವ ಶಾಸ್ತ್ರ ವಿಭಾಗದಲ್ಲಿ ಸುಬ್ಬರಾಮನ್ ಅವರಿಗೆ ಪದ್ಮ ಪ್ರಶಸ್ತಿ ಲಭಿಸಿದೆ.
6 ಜನರಿಗೆ ಪದ್ಮ ವಿಭೂಷಣ, 9 ಜನರಿಗೆ ಪದ್ಮ ಭೂಷಣ ಹಾಗೂ 91 ಜನರಿಗೆ ಪದ್ಮಶ್ರೀ ಪ್ರಶಸ್ತಿ ಪ್ರಕಟಿಸಲಾಗಿದೆ.
ಜಿಲ್ಲಾಧಿಕಾರಿಗೆ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ
https://pragati.taskdun.com/state-level-award-presentation-to-the-collector/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ