*ವಿವಿಧೆಡೆ ಪದ್ಮಶ್ರೀ ಡಾ. ಪ್ರಭಾಕರ ಕೋರೆ ಜನ್ಮ ದಿನ ಅದ್ಧೂರಿ ಆಚರಣೆ *

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಾಹೆರನ ಕುಲಪತಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ ಅವರ ಜನ್ಮ ದಿನಾಚರಣೆ ಅಂಗವಾಗಿ ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ‘ALIMCO’ ( ಭಾರತೀಯ ಕೃತಕ ಅಂಗಗಳ ಉತ್ಪಾದನಾ ನಿಗಮ) ಕಾಹೆರನ ಕೆಎಲ್‌ಇ ಚಾರಿಟೇಬಲ್ ಆಸ್ಪತ್ರೆ ಇವುಗಳ ಸಂಯುಕ್ತಾಶ್ರದಲ್ಲಿ ಹಿರಿಯ ನಾಗರೀಕರಿಗೆ ಗಾಲಿಯುಕ್ತ ಖುರ್ಚಿ, ಶ್ರವಣ ಸಾಧನ ಹಾಗೂ ಜೀವನಾಧಾರಕ್ಕೆ ಅವಶ್ಯವಿರುವ ಸಾಮಗ್ರಿಗಳನ್ನು ವಿತರಿಸಲಾಯಿತು.
ನಂತರ ಮಾತಾಡಿದ ಜೆಎನ್ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ರಾಜೇಶ ಪವಾರ ಅವರು, ಈ ಭಾಗದಲ್ಲಿ ಅಂಗವಿಕಲತೆಯಿಂದ ಬಳಲುತ್ತಿರುವವರನ್ನು ಗುರುತಿಸಿ ಅವರಿಗೆ ಅವಶ್ಯವಿರುವ ಕಾಳಜಿ ವಹಿಸುವದರೊಂದಿಗೆ ಅವರ ಅಗತ್ಯಗಳನ್ನು ಪೂರೈಸಲು ಸದಾ ಒಂದು ಹೆಜ್ಜೆ ಮುಂದಿರುತ್ತದೆ. ಆದ್ದರಿಂದ ಯಾರೇ ಕೂಡ ಅಂಗವಿಕಲತೆಯಿಂದ ಬಳಲುತ್ತಿದ್ದರೆ ನಮ್ಮ ಗಮನಕ್ಕೆ ತೆಗೆದುಕೊಂಡು ಬರಬೇಕೆಂದು ಕೋರಿದರು.
ಈ ಸಂದರ್ಭದಲ್ಲಿ ಕಾಹೆರನ ಹೊಸ ಯೋಜನೆಗಳ ನಿರ್ದೇಶಕರಾದ ಡಾ. ವಿ ಡಿ ಪಾಟೀಲ, ಚಾರಿಟೇಬಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಆರೀಫ್ ಮಾಲ್ದಾರ, ಡಾ. ಆರ್ ಎಸ್ ಮುಧೋಳ, ಡಾ. ಅಂಜಲಿ ಮೆಟಗುಡಮಠ, ಅಲಿಮಕೋ ಮೇಲ್ವಿಚರಕರಾದ ಸನಾತನ, ಡಾ. ರವಿ ಜತ್ತಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಆಸ್ಪತ್ರೆಯ ರೋಗಿಗಳಿಗೆ ಹಣ್ಣು ವಿತರಿಸಲಾಯಿತು. ಈ ಸಂದರ್ಭದಲ್ಲಿ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ರಾಜಶೇಖರ ಸೋಮನಟ್ಟಿ, ಗುಲ್ನಾಜ, ವಿನೋದ ದೇಶನೂರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಯಳ್ಳೂರ ಕೆಎಲ್‌ಇ ಆಸ್ಪತ್ರೆಯಲ್ಲಿ ಮೆಗಾ ಆರೋಗ್ಯ ತಪಾಸಣಾ ಶಿಬಿರ

ಕಾಹೇರ್‌ನ ಕುಲಾಧಿಪತಿಗಳಾದ ಪದ್ಮಶ್ರೀ ಡಾ. ಪ್ರಭಾಕರ ಕೋರೆ ಅವರ ಜನ್ಮದಿನದ ಅಂಗವಾಗಿ ಕೆಎಲ್‌ಇ ಶತಮಾನೋತ್ಸ ಚಾರಿಟೇಬಲ್ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರ, ಯಳ್ಳೂರ ರಸ್ತೆ, ಬೆಳಗಾವಿ ವತಿಯಿಂದ ಸಾರ್ವಜನಿಕರಿಗಾಗಿ ಶನಿವಾರ ಮೆಗಾ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು.
ಶಿಬಿರವನ್ನು ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಒಒ) ನವೀನ್ ಎನ್. ಉದ್ಘಾಟಿಸಿ ಮಾತನಾಡಿ, ಪದ್ಮಶ್ರೀ ಡಾ. ಪ್ರಭಾಕರ ಕೋರೆ ಅವರ ಜನ್ಮದಿನದ ಶುಭಾಶಯಗಳನ್ನು ಸಲ್ಲಿಸಿದರು. ಆಸ್ಪತ್ರೆಯು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ವಿವಿಧ ಆರೋಗ್ಯ ಶಿಬಿರಗಳು, ವಿಶೇಷ ರಿಯಾಯಿತಿ ಯೋಜನೆಗಳು ಹಾಗೂ ಆರೋಗ್ಯ ಜಾಗೃತಿ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುತ್ತಿದ್ದು, ಅವುಗಳ ಮಾಹಿತಿಯನ್ನು ಆಸ್ಪತ್ರೆಯ ಅಧಿಕೃತ ಫೇಸ್‌ಬುಕ್ ಹಾಗೂ ಇನ್‌ಸ್ಟಾಗ್ರಾಮ್ ಪುಟಗಳಲ್ಲಿ ಪ್ರಕಟಿಸಲಾಗುತ್ತದೆ.
ಸಾರ್ವಜನಿಕರು ಈ ಸಾಮಾಜಿಕ ಜಾಲತಾಣಗಳನ್ನು ಅನುಸರಿಸಿ ಆಸ್ಪತ್ರೆಯ ಸೇವೆಗಳ ಸದುಪಯೋಗ ಪಡೆದುಕೊಳ್ಳುವಂತೆ ಅವರು ಕರೆ ನೀಡಿದರು. ಶಿಬಿರದಲ್ಲಿ ಉಚಿತ ತಜ್ಞ ವೈದ್ಯರ ಸಲಹೆ, ಉಚಿತ ರಕ್ತದಲ್ಲಿನ ಸಕ್ಕರೆ ಪರೀಕ್ಷೆ, ಉಚಿತ ಬೋನ್ ಮಿನರಲ್ ಡೆನ್ಸಿಟಿ (ಃಒಆ) ಪರೀಕ್ಷೆ, ಉಚಿತ ಇಸಿಜಿ (ಇಅಉ) ಪರೀಕ್ಷೆ ಹಾಗೂ ಹೆಚ್ಚುವರಿ ಪ್ರಯೋಗಾಲಯ ಪರೀಕ್ಷೆಗಳ ಮೇಲೆ ಶೇ.೨೦ ರಿಯಾಯಿತಿ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು. ಜೊತೆಗೆ ಇವತ್ತಿನ ದಿನ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿದ್ದೇವೆ ಆಸಕ್ತರು ರಕ್ತದಾನ ಮಾಡಿ ಎಂದು ಕರೆ ನೀಡಿದರು.
ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಸಂಜಯ ಕಂಬಾರ ಮಾತನಾಡಿ, ಪದ್ಮಶ್ರೀ ಡಾ. ಪ್ರಭಾಕರ ಕೋರೆ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಸಲ್ಲಿಸಿ, ಸಾರ್ವಜನಿಕರು ಆರೋಗ್ಯ ತಪಾಸಣೆಯನ್ನು ನಿರ್ಲಕ್ಷಿಸದೆ ಇಂತಹ ಶಿಬಿರಗಳ ಪ್ರಯೋಜನ ಪಡೆದು ಆರೋಗ್ಯವಂತರಾಗಿರಬೇಕು ಎಂದು ಕರೆ ನೀಡಿದರು. ಬೆಳಿಗ್ಗೆ ೯ರಿಂದ ಸಂಜೆ ೫ರವರೆಗೆ ಶಿಬಿರವನ್ನು ಆಯೋಜಿಸಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.
ಮೆಗಾ ಆರೋಗ್ಯ ತಪಾಸಣಾ ಶಿಬಿರಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ೧೦೦ಕ್ಕೂ ಹೆಚ್ಚು ಮಂದಿ ಉಚಿತ ಆರೋಗ್ಯ ಸೇವೆಗಳ ಪ್ರಯೋಜನ ಪಡೆದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಅನಾಥ ಮಕ್ಕಳಿಗೆ ಹಣ್ಣು ಹಂಪಲ ವಿತರಣೆ

ಕೆ. ಎಲ್. ಇ. ಸಂಸ್ಥೆಯ, ರಾಜಾ ಲಖಮಗೌಡ ವಿಜ್ಞಾನ ಪದವಿ ಪೂರ್ವ ಹಾಗೂ ಪದವಿ ಮಹಾವಿದ್ಯಾಲಯದ ಸಹಯೋಗದಲ್ಲಿ ಪದ್ಮಶ್ರೀ ಪ್ರಶಸ್ತಿ ವಿಜೇತರಾದ ಡಾ. ಪ್ರಭಾಕರ ಕೋರೆ ಅವರ 79 ನೇ ಹುಟ್ಟುಹಬ್ಬದ ಪ್ರಯುಕ್ತ ಬೆಳಗಾವಿ ವೈಭವ ನಗರದ ನಂದನ ಅನಾಥಾಶ್ರಮಕ್ಕೆ ಭೇಟಿ ನೀಡಿ, ಅನಾಥ ಮಕ್ಕಳಿಗೆ ಹಣ್ಣು ಹಂಪಲ ವಿತರಿಸಲಾಯಿತು.
ಇದೇ ಸಂದರ್ಭದಲ್ಲಿ ಪದವಿ ಪ್ರಾಚಾರ್ಯಯಾದ ಡಾ. ಜ್ಯೋತಿ ಎಸ್ ಕವಳೇಕರ, ಪದವಿಪೂರ್ವ ಪ್ರಾಚಾರ್ಯರಾದ ವಿಶ್ವನಾಥ ಕಾಮಗೋಳ, ಉಪರಾಚಾರ್ಯರಾದ ಡಾ ಸಂದೀಪ ಜವಳಿ, ಡಾ ವಿನಯ ಕುಮಾರ ಎಂ, ಡಾ ಶಿವಾನಂದ ಬುಲಬುಲಿ, ಪ್ರೊ ಎಸ್ ಬಿ ತಾರದಾಳೆ ಹಾಗೂ ವಿಶ್ವನಾಥ ಗಾಣಿಗೇರ ಉಪಸ್ಥಿತರಿದ್ದರು.



