Film & EntertainmentLatestNational

*ನಟ ಧರ್ಮೇಂದ್ರ ಗೆ ಮರಣೋತ್ತರ ಪದ್ಮ ವಿಭೂಷಣ, ಮಲಯಾಳಂ ಸೂಪರ್ ಸ್ಟಾರ್ ಮುಮ್ಮುಟಿಗೆ ಪದ್ಮ ಭೂಷಣ ಪ್ರಶಸ್ತಿ ಘೋಷಣೆ*

ಇನ್ನೂ ಯಾರಿಗೆಲ್ಲ ಪದ್ಮ ಪ್ರಶಸ್ತಿ?

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಸರ್ಕಾರ 2026ರ ಸಾಲಿನ ಪದ್ಮ ಪ್ರಶಸ್ತಿಗಳನ್ನು ಘೋಷಿಸಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಈ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಕಲಾ ವಿಭಾಗದಲ್ಲಿ ಹಲವು ಸಿನಿಮಾ ನಟ, ನಟಿಯರಿಗೆ ಪದ್ಮವಿಭೂಷಣ ಹಾಗೂ ಪದ್ಮಭೂಷಣ ಪ್ರಶ್ನಸಿಗಳು ದೊರೆತಿವೆ.

ಬಾಲಿವುಡ್ ನಟ ಧರ್ಮೇಂದ್ರ ಅವರಿಗೆ ಮರಣೋತ್ತರವಾಗಿ ಪದ್ಮ ವಿಭೂಷಣ ಪ್ರಶಸ್ತಿ ಘೋಷಿಸಲಾಗಿದೆ. ಧರ್ಮೇಂದ್ರ ಅವರು 2025ರ ನವೆಂಬರ್​​ನಲ್ಲಿ ನಿಧನ ಹೊಂದಿದರು. ತಮಿಳುನಾಡಿನ ವೈಯಲಿನ್ ವಾದಕಿ ಎನ್ ರಾಜನ್ ಅವರಿಗೂ ಸಹ ಪದ್ಮ ವಿಭೂಷಣ ಪ್ರಶಸ್ತಿ ದೊರೆತೆದೆ.

ಒಟ್ಟು 13 ಪದ್ಮ ಭೂಷಣ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಅವುಗಳಲ್ಲಿ ನಾಲ್ಕು ಕಲಾ ವಿಭಾಗಕ್ಕೆ ನೀಡಲಾಗಿದೆ. ಖ್ಯಾತ ಗಾಯಕಿ ಅಲ್ಕಾ ಯಾಗ್ನಿಕ್ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ನೀಡಲಾಗಿದೆ. ಮಲಯಾಳಂ ಸೂಪರ್ ಸ್ಟಾರ್, ಮಮ್ಮುಟಿ ಅವರಿಗೆ ಪದ್ಮ ಭೂಷಣ ಗೌರವ ದೊರೆತಿದೆ. ಜಾಹೀರಾತು ಕ್ಷೇತ್ರದ ದಿಗ್ಗಜ ಪಿಯೂಷ್ ಪಾಂಡೆ ಅವರಿಗೆ ಮರಣೋತ್ತರವಾಗಿ ಪದ್ಮ ಭೂಷಣ ಗೌರವ ನೀಡಲಾಗಿದೆ.ಧಕ್ಕಿದೆ. ಶತಾವಧಾನಿ ಆರ್.ಗಣೇಶ್ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ಘೋಷಿಸಲಾಗಿದೆ.

Home add -Advt

ತೆಲುಗು ನಟ ರಾಜೇಂದ್ರ ಪ್ರಸಾದ್ ಹಾಗೂ ಮಾಗಂಟಿ ಮುರಳಿ ಮೋಹನ್ ಸೇರಿದಂತೆ ಕೆಲವು ಕಲಾವಿದರಿಗೆ ಪದ್ಮಶ್ರೀ ಪ್ರಶಸ್ತಿಗಳನ್ನು ಘೋಷಿಸಲಾಗಿದೆ.

Related Articles

Back to top button