Belagavi NewsBelgaum News

*ಪ್ರೀತಿಸುವಂತೆ ಪಾಗಲ್ ಪ್ರೇಮಿಯ ಕಾಟ: ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕಿ ಸಾವು*

ಬೆಳಗಾವಿಯಲ್ಲಿ ಮತ್ತೊಂದು ಘೋರ ಘಟನೆ

ಪ್ರಗತಿವಾಹಿನಿ ಸುದ್ದಿ: ಪಾಗಲ್ ಪ್ರೇಮಿಯೊಬ್ಬ ಬಾಲಕಿಗೆ ಪ್ರೀತ್ಸೆ ಪ್ರೀತ್ಸೆ ಎಂದು ಕಾಟ ಕೊಟ್ಟ ಪರಿಣಾಮ ನೊಂದ ಬಾಲಕಿ ದುರಂತ ಅಂತ್ಯ ಕಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ನೊಂದ ಬಾಲಕಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ.

ಸಿದ್ದಲಿಂಗ ಪೂಜಾರಿ ಎಂಬಾತ ಬಾಲಕಿಗೆ ಪ್ರೀತಿಸುವಂತೆ ಕಾಟ ಕೂಟ್ಟಿದ್ದನಂತೆ. ಇದರಿಂದ ನೊಂದ ಬಾಲಕಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಳು. ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ.

ಆರೋಪಿ ಸಿದ್ದಲಿಂಗನನ್ನು ಪೊಲೀಸರು ಬಂಧಿಸಿದ್ದಾರೆ. ಘಟಪ್ರಭಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button