Cancer Hospital 2
Beereshwara 36
LaxmiTai 5

*ಯುವತಿಯ ಬೆನ್ನುಬಿದ್ದ ಪಾಗಲ್ ಪ್ರೇಮಿ; ಪ್ರೀತಿಸುವಂತೆ ಕಿರುಕುಳ; ಮನೆ ಮೇಲೆ ಕಲ್ಲು ತೂರಾಟ ನಡೆಸಿ ಹುಚ್ಚಾಟ*

Anvekar 3
GIT add 2024-1

ಪ್ರಗತಿವಾಹಿನಿ ಸುದ್ದಿ: ಇಡೀ ರಾಜ್ಯವನ್ನೆ ಬೆಚ್ಚಿ ಬಿಳಿಸಿರುವ ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಹಾಗೂ ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ಬಳಿಕ ಇದೀಗ ಬೆಳಗಾವಿಯಲ್ಲಿಯೂ ಇಂತಹ ಘಟನೆ ಮರುಕಳಿಸುವ ಆತಂಕ ಎದುರಾಗಿದೆ. ಪಾಗಲ್ ಪ್ರೇಮಿಯ ಕಾಟಕ್ಕೆ ಇಡೀ ಕುಟುಂಬವೇ ನರಕಯಾತನೆ ಅನುಭವಿಸುತ್ತಿರುವ ಘಟನೆ ಬೆಳಗಾವಿಯ ಕಿಣೈ ಗ್ರಾಮದಲ್ಲಿ ‌ತಡವಾಗಿ ಬೆಳಕಿಗೆ ಬಂದಿದೆ.

ಕಿಣೈ ಗ್ರಾಮದ ಯುವತಿ ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿ ಮನೆ ಮೇಲೆಯೇ ಕಲ್ಲು ತೂರಾಟ ನಡೆಸಿಸಿರುವ ಪಾಗ್ಲ್ ಪ್ರೇಮಿ, ಕಿಟಕಿ ಗ್ಲಾಸ್ ಪುಡಿ ಪುಡಿ ಮಾಡಿದ್ದಾನೆ. ಈತನ ಹುಚ್ವಾಟದಿಂದ ಗ್ರಾಮದ ಜನರೇ ಬೆಚ್ಚಿಬಿದ್ದಿದ್ದಾರೆ.

ಬೆಳಗಾವಿ ತಾಲೂಕಿನ ಕಿಣೈ ಗ್ರಾಮದ ತಿಪ್ಪಣ್ಣ ಡೋಕರೆ (27) ಎಂಬಾತ, ಗ್ರಾದಲ್ಲಿನ ಯುವತಿಗೆ ತನನ್ನು ಪ್ರೀತಿಸು, ಮದುವೆಯಾಗುವಂತೆ ಕಳೆದ ಮೂರು ವರ್ಷಗಳಿಂದ ಪೀಡಿಸುತ್ತಿದ್ದಾನೆ. ಯುವತಿ ಬಿಕಾಂ ಓದುತ್ತಿದ್ದು, ತಿಪ್ಪಣ್ಣ ಡೋಕರೆ ಪ್ರೀತಿ ನಿರಾಕರಿಸಿದ್ದಾಳೆ. ಇದಕ್ಕೆ ಹುಬ್ಬಳ್ಳಿಯ ನೇಹಾಳಿಗೆ ಆದ ಗತಿಯೇ ನಿನಗೂ ಆಗಲಿದೆ ಎಂದು ಯುವಕ ಬೆದರಿಕೆ ಹಾಕಿದ್ದಾನೆ.

Emergency Service

ಯುವತಿಯ ಬೆನ್ನು ಬಿದ್ದು, ನಿತ್ಯ ಕಾಲೇಜಿಗೆ ಹೋಗುವಾಗಲೂ ಫಾಲೋ ಮಾಡಿ ಯುವತಿಗೆ ಕಿರುಕುಳ ನೀಡುತ್ತಿದ್ದ. ತಿಪ್ಪಣ್ಣ ಡೋಕರೆ ಹುಚ್ಚಾಟಕ್ಕೆ ಬೇಸತ್ತು ಕಾಲೇಜಿಗೆ ಹೋಗುವುದನ್ನೇ ಯುವತಿ ನಿಲ್ಲಿಸಿದ್ದು, ಕಿಣೆಯಲ್ಲಿರುವ ಮನೆಯಲ್ಲಿ ತಾಯಿ ಜೊತೆಗೆ ವಾಸವಿದ್ದಾಳೆ. ಯುವತಿ ಜೊತೆಗೆ ಮದುವೆ ಮಾಡಿ ಕೊಡುವಂತೆ ಇಲ್ಲಿದ್ದರೆ ಹತ್ಯೆಗೈಯ್ಯುವುದಾಗಿ ಯುವತಿ ಹಾಗೂ ತಾಯಿಗೆ ತಿಪ್ಪಣ್ಣ ಬೇದರಿಕೆ ಹಾಕಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಕೆಲೆ ತಿಂಗಳ ಹಿಂದೆ ಯುವತಿ ಮನೆಯ ಹಿಂಬಾಗಿಲಿಗೆ ಬೆಂಕಿ ಹಚ್ಚಿ ಹುಚ್ಚಾಟ ಮೆರೆದಿದ್ದನಂತೆ ಯುವಕ. ಇದಾದ ಬಳಿಕ ಈಗ ಮೂರು ದಿನಗಳ ಹಿಂದೆ ಮನೆಗೆ ಬಂದು ಗಲಾಟೆ ಮಾಡಿ ಮನೆಯಲ್ಲಿ ಯಾರು ಇಲ್ಲದಿರುವಾಗ ಕಿಟಕಿ ಗ್ಲಾಸ್ ಒಡೆದು ಪುಂಡಾಟ ಮೆರೆದಿದ್ದಾನೆ. ಮನೆಯ ಪಕ್ಕದಲ್ಲಿಯೇ ಜಮೀನಿಗೆ ಬರುವ ನೆಪವೊಡ್ಡಿ ಕಿರುಕುಳ ನೀಡಿದ್ದಾನೆ.
ತಿಪ್ಪಣ್ಣನ ಕಿರುಕುಳಕ್ಕೆ ಬೇಸತ್ತು ಕುಟುಂಬದವರು ಪೊಲೀಸರ ಮೊರೆ ಹೋಗಿದ್ದಾರೆ.

ಇನ್ನು ಕಳೆದ ಮೂರು ವರ್ಷಗಳ ಹಿಂದೆಯೇ ತಿಪ್ಪಣ್ಣ ವಿರುದ್ಧ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆಗ ಪೊಲೀಸರ ವಾರ್ನ್‌ಗೆ ಕೆಲ ದಿನಗಳ ಕಾಲ ಯುವತಿ ತಂಟೆಗೆ ಹೋಗದೇ ಸೈಲೆಂಟ್ ಆಗಿದ್ದ. ಈಗ ಮತ್ತೆ ಬಾಲಬಿಚ್ಚಿದ್ದಾನೆ. ತಿಪ್ಪಣ್ಣ ವಿರುದ್ಧ ಮತ್ತೆ ಪೊಲೀಸರ ಮೊರೆ ಹೋಗಿದ್ದೇವೆ ಆದರೆ ಎರಡು ಬಾರಿ ಹೋದರೂ ನಾಳೆ ಬನ್ನಿ ಎಂದು ಪೊಲೀಸರು ನಿರ್ಲಕ್ಷ್ಯ ಮಾಡಿದ್ದಾರೆ. ಜೀವ ಭಯದಲ್ಲಿ ಕಾಲ ಕಳೆಯುವ ಸ್ಥಿತಿಯಿದೆ ಎಂದು ಕುಟುಂಬದವರು ಆತಂಕ ವ್ಯಕ್ತಪಡಿಸಿದ್ದಾರೆ.


Bottom Add3
Bottom Ad 2