Kannada NewsKarnataka NewsLatest
ವಿಜಯನಗರದಲ್ಲಿ ಕಾಂಕ್ರಿಟ್ ರಸ್ತೆ, ಗಟಾರ್ ನಿರ್ಮಾಣಕ್ಕೆ ಚಾಲನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವಿಜಯ ನಗರದ ಹೊರ ಪ್ರದೇಶಗಳಲ್ಲಿ ಮಹಾನಗರ ಪಾಲಿಕೆಯಿಂದ ಮಂಜೂರಾದ ಒಟ್ಟು 20 ಲಕ್ಷ ರೂ. ಗಳ ವೆಚ್ಚದಲ್ಲಿ ಗಟಾರ್ ಮತ್ತು ಕಾಂಕ್ರೀಟ್ ರಸ್ತೆಗಳ ನಿರ್ಮಾಣದ ಕಾಮಗಾರಿಗೆ ಚಾಲನೆ ನೀಡಲಾಯಿತು.
ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅನುಪಸ್ಥಿತಿಯಲ್ಲಿ ಸ್ಥಳೀಯ ಜನ ಪ್ರತಿನಿಧಿಗಳು ಚಾಲನೆಯನ್ನು ನೀಡಿದರು.

ಈ ಸಂದರ್ಭದಲ್ಲಿ ನಿಕಟಪೂರ್ವ ಕಾರ್ಪೋರೇಟರ್ ಅನುಶ್ರೀ ದೇಶಪಾಂಡೆ, ಸ್ಥಳೀಯರು, ಯುವರಾಜ ಕದಂ, ಮೃಣಾಲ್ ಹೆಬ್ಬಾಳಕರ, ಕಾರ್ಯಕರ್ತರು ಉಪಸ್ಥಿತರಿದ್ದರು.




