Latest

ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲೆ ಆರಂಭ: ಸಚಿವ ಸುರೇಶ್ ಕುಮಾರ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಾಲೆ ಆರಂಭ ವಿಚಾರದಲ್ಲಿ ವೈಯಕ್ತಿಕ ಪ್ರತಿಷ್ಠೆ ಪ್ರಶ್ನೆ ಇಲ್ಲ. ಮಕ್ಕಳ ಭವಿಷ್ಯದ ದೃಷ್ಟಿ ಅಡಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ನಾವ್ಯಾರೂ ವೈಯಕ್ತಿಕ ಪ್ರತಿಷ್ಠೆಗಾಗಿ ಕೆಲಸ ಮಾಡುತ್ತಿಲ್ಲ. ಆರೋಗ್ಯ, ಶಿಕ್ಷಣ ಇಲಾಖೆ ಸಮನ್ವಯತೆಯಿಂದ ಕೆಲಸ ಮಾಡುತ್ತಿದೆ. ನಾವೆಲ್ಲರೂ ಮುಖ್ಯಮಂತ್ರಿಗಳ ಮಾರ್ಗದರ್ಶನದಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಶಾಲೆ ಆರಂಭಿಸುವುದಕ್ಕೆ ನಾನು ಯಾವುದೇ ಹಠ ಹಿಡಿದಿಲ್ಲ. ಶಾಲೆ ಆರಂಭಿಸುವುದು ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಲ್ಲ. ಮಕ್ಕಳ ಭವಿಷ್ಯ ದೃಷ್ಠಿಯಿಂದ ಆರಂಭ ಮಾಡುತ್ತಿದ್ದೇವೆ ಅಷ್ಟೇ ಎಂದು ಹೇಳಿದರು.

Related Articles

Back to top button