Kannada NewsKarnataka NewsNationalPolitics
*ಬೆಳ್ಳಂ ಬೆಳಗ್ಗೆ ಆರ್ ಜೆ ಡಿ ಮುಖಂಡನ ಮೇಲೆ ಗುಂಡಿನ ದಾಳಿ*

ಪ್ರಗತಿವಾಹಿನಿ ಸುದ್ದಿ: ಬೆಳಗ್ಗೆ ವಾಕಿಂಗ್ಗೆಂದು ಹೋಗಿದ್ದ ಆರ್ ಜೆಡಿ ಪಕ್ಷದ ಮುಖಂಡ ಪಂಕಜ್ ಯಾದವ್ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ.
ಬಿಹಾರದಲ್ಲಿ ಈ ಘಟನೆ ನಡೆದಿದೆ. ಆರೋಪಿಗಳು ಪಂಕಜ್ ಅವರ ಎದೆ ಮೇಲೆ ಹಲವು ಸುತ್ತಿನ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಕೂಡಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ, ಆರ್ಜೆಡಿ ನಾಯಕನ ಮೇಲೆ ಗುಂಡು ಹಾರಿಸಿದವರು ಯಾರು ಮತ್ತು ಏಕೆ ಎಂಬುದು ಇನ್ನೂ ಬಹಿರಂಗವಾಗಿಲ್ಲ.
ಘಟನೆ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮಾಹಿತಿ ತಿಳಿದ ತಕ್ಷಣ ಸಫಿಯಾ ಸರಾಯ್, ಖಾಸಿಂ ಬಜಾರ್ ಮತ್ತು ಕೊತ್ವಾಲಿ ಪೊಲೀಸರು ಆಗಮಿಸಿದರು. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.




