Belagavi NewsBelgaum NewsKannada NewsKarnataka News
*ಕೊಲೆ ಮಾಡಿ ಪೊಲೀಸರಿಗೆ ಶರಣಾದ ಆರೋಪಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಣ್ಣ ಗಲಾಟೆ ಮುಂದೆ ದೊಡ್ಡಗಲಾಟೆಯಾಗಿ ಕೊಲೆಯಲ್ಲಿ ಅಂತ್ಯವಾಗಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ ಪಟ್ಟಣದ ಹೊರವಲಯದ ಸಾಗರ ಎಂಬಲ್ಲಿ ನಡೆದಿದೆ.
ಕೊಲೆಯಾದ ಯುವಕನನ್ನು ಯಾಸಿನ್ ಜಾತಗಾರ (22) ಎಂದು ಗುರುತಿಸಲಾಗಿದೆ. ಇನ್ನು ಕೊಲೆ ಆರೋಪಿಯನ್ನು ರೋಹಿತ್ ಜಾಧವ್ ಎಂದು ತಿಳಿದುಬಂದಿದೆ.
ಯಾಸಿನ್ ನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಬಳಿಕ ತಾನಾಗಿಯೇ ಪೊಲೀಸರಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ಬೆಳಗಾವಿ ಎಸ್ಪಿ ಭೀಮಾಶಂಕರ್ ಗುಳೇದ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಡಚಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.




