Karnataka News

*ಕಾಲೇಜು ವಿದ್ಯಾರ್ಥಿ ಮೇಲೆಯೇ ಹರಿದ ಲಾರಿ: ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿ ಮೇಲೆ ಲಾರಿ ಹರಿದು ಸ್ಥಳದಲ್ಲೇ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೋಟೇಶ್ವರದ ಹಾಲಾಡಿ ರಸ್ತೆಯಲ್ಲಿ ನಡೆದಿದೆ.

ಧನುಷ್ ಮೃತ ವಿದ್ಯಾರ್ಥಿ. ಕೋಟೇಶ್ವರದ ವರದರಾಜ ಶೆಟ್ಟಿ ಕಾಲೇಜಿನಲ್ಲಿ ಪ್ರಥಮ ಬಿಎಸ್ ಸಿ ಓದುತ್ತಿದ್ದ. ಎಂದಿನಂತೆ ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ.

Home add -Advt

ಎದುರಿನಿಂದ ಬರುತ್ತಿದ್ದ ಕಾರು ತಪ್ಪಿಸಲು ಹೋಗಿ ಲಾರಿ ಚಾಲಕ ನಿಯಂತ್ರಣ ಕಳೆದುಕೊಂಡು ಫುಟ್ ಪಾತ್ ಮೇಲೆ ನಡೆದು ಹೋಗುತ್ತಿದ್ದ ವಿದ್ಯಾರ್ಥಿ ಧನುಷ್ ಮೇಲೆಯೇ ಲಾರಿ ಹತ್ತಿಸಿದ್ದಾನೆ. ಸ್ಥಳದಲ್ಲೇ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ.


Related Articles

Back to top button