Film & EntertainmentKannada NewsKarnataka NewsLatest

*ಹಿರಿಯ ನಟಿ ಹೇಮಾ ಚೌಧರಿ ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಹೇಮಾ ಚೌಧರಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹೇಮಾ ಚೌಧರಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯು ನಲ್ಲಿ ಚಿಕಿಸೆ ಪಡೆಯುತ್ತಿದ್ದಾರೆ. ಹೇಮಾ ಚೌಧರಿ ಅವರಿಗೆ ಬ್ರೇನ್ ಹ್ಯಾಮರೇಜ್ ಆಗಿದೆ ಎಂದು ತಿಳಿದುಬಂದಿದೆ.

Home add -Advt

ಎರಡು ದಿನಗಳ ಹಿಂದೆ ಹೇಮಾ ಚೌಧರಿಗೆ ಬ್ರೇನ್ ಹ್ಯಾಮರೇಜ್ ಆಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎನ್ನಲಾಗಿದೆ. ಹೇಮಾ ಚೌಧರಿ ಅವರ ಮಗ ಐರ್ಲೆಂಡ್ ನಲ್ಲಿದ್ದು ಅವರಿಗೆ ಮಾಹಿತಿ ನೀಡಲಾಗಿದೆ. ಹೇಮಾ ಚೌಧರಿ ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸಿದ್ದಾರೆ.


Related Articles

Back to top button