Kannada NewsKarnataka NewsLatest

*7 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ನಿವೃತ್ತ ಸಬ್ ಇನ್ಸ್ ಪೆಕ್ಟರ್ ಬಂಧನ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 7 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಸಬ್ ಇನ್ಸ್ ಪೆಕ್ಟರ್ ನನ್ನು ಬೆಂಗಳೂರಿನ ಶಿವಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆರೋಪಿ 74 ವರ್ಷದ ನಿವೃತ್ತ ಸಬ್ ಇನ್ಸ್ ಪೆಕ್ಟರ್. ಶಿವಾಜಿನಗರದ ವ್ಯಾಪ್ತಿಯಲ್ಲಿ ತನ್ನ ಕುಟುಂಬದೊಂದಿಗೆ ವಾಸವಾಗಿದ್ದ ಆರೋಪಿ, ಅದೇ ಕಟ್ಟಡದ ಒಂದು ಭಾಗದಲ್ಲಿ ಪೋಷಕರೊಂದಿಗೆ ವಾಸವಾಗಿದ್ದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ.

Home add -Advt

ಬಾಲಕಿ ನೋವಿನಿಂದ ಒದ್ದಾಡುತ್ತಿದ್ದಾಗ ಪೋಷಕರು ವಿಚಾರಿಸಿದ್ದಾರೆ. ಈ ವೇಳೆ ಬಾಲಕಿ ಪೋಷಕರಿಗೆ ತಿಳಿಸಿದ್ದಾಳೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿದ ಪೋಷಕರು, ಶಿವಾಜಿ ನಗರ ಠಾಣೆಯಲ್ಲಿ ಪ್ರಾರಣ ದಾಖಲಿಸಿದ್ದರು.

ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಿವೃತ್ತ ಸಬ್ ಇನ್ಸ್ ಪೆಕ್ಟರ್ ನನ್ನು ಬಂಧಿಸಿದ್ದಾರೆ.


Related Articles

Back to top button