LatestUncategorized

*50 ದಿನಗಳ ಬಳಿಕ BJP ಸರ್ಕಾರ ಇರಲ್ಲ ಎಂದ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತಕ್ಕೆ ಜನರು ಬೇಸತ್ತಿದ್ದಾರೆ. ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆಶಿವಕುಮಾರ್, ಬಿಜೆಪಿ ಸರ್ಕಾರ ಇನ್ನು 50 ದಿನಗಳ ಬಳಿಕ ಇರುವುದಿಲ್ಲ. ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ನಾವು ರಾಜ್ಯದ ಜನತೆಗೆ ಉತ್ತಮ ಆಡಳಿತ ನೀಡುತ್ತೇವೆ ಎಂದರು.

Home add -Advt

ಚುನಾವಣೆಯಲ್ಲಿ ಕಾಂಗ್ರೆಸ್ 160 ಸ್ಥಾನಗಳಲ್ಲಿ ಗೆಲ್ಲುವ ಸೂಚನೆಗಳು ಕಾಣುತ್ತಿವೆ. ಆದರೆ ನಮ್ಮ ಸರ್ವೆ ಪ್ರಕಾರ 136 ಸ್ಥಾನಗಳಲ್ಲಿ ಗೆಲ್ಲುವುದು ಖಚಿತವಾಗಿದೆ.ಚುನಾವಣೆಯಲ್ಲಿ ಬಿಜೆಪಿ ಸೋಲು ನಿಶ್ಚಿತ. ಕಾಂಗ್ರೆಸ್ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು.

ಇದೇ ವೇಳೆ ಡಾ.ಜಿ.ಪರಮೇಶ್ವರ್, ರಣದೀಪ್ ಸುರ್ಜೇವಾಲ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಪರಮೇಶ್ವರ್ ನಮ್ಮ ಪಕ್ಷದ ಆಸ್ತಿ. ಬೆಂಗಳೂರು ಟ್ರಾಫಿಕ್ ವಿಚಾರ ಸಂಬಂಧ ಇಬ್ಬರು ನಾಯಕರು ಭೇಟಿಯಾಗಿ ಚರ್ಚಿಸಿದ್ದಾರೆ. ಪರಮೇಶ್ವರ್ ನೇತೃತ್ವದ ಒಂದು ತಂಡ ಸಿಂಗಾಪುರಕ್ಕೆ ಕಳುಹಿಸಲು ನಿರ್ಧರಿಸಿದ್ದೆವೆ. ಈ ಬಗ್ಗೆ ಇಬ್ಬರು ನಾಯಕರು ಚರ್ಚೆ ನಡೆಸಿದ್ದಾರೆ ಎಂದು ಹೇಳಿದರು.

*ಭಿನ್ನಾಭಿಪ್ರಾಯವಿದೆ ಆದರೆ….ಎಂದು ಡಾ.ಜಿ.ಪರಮೇಶ್ವರ್ ಹೇಳಿದ್ದೇಕೆ?*

https://pragati.taskdun.com/g-parameshwarranadeep-surjewalameet/

Related Articles

Back to top button