Latest

ಏರ್ ಫೋರ್ಟ್ ಗೆ ಬಂದಿದ್ದ ಸಿಎಂ ಯಡಿಯೂರಪ್ಪಗೆ ಅಮಿತ್ ಶಾ ಬುಲಾವ್

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೆಹಲಿ ಪ್ರವಾಸದಿಂದ ಬೆಂಗಳೂರಿಗೆ ಹಿಂದಿರುಗಲು ಏರ್ ಪೊರ್ಟ್ ನತ್ತ ಪ್ರಯಾಣಿಸುತ್ತಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಗೃಹ ಸಚಿವ ಅಮಿತ್ ಶಾ ದಿಢೀರ್ ಬುಲಾವ್ ನೀಡಿದ್ದಾರೆ.

ನಿನ್ನೆ ಸಂಜೆ ಪ್ರಧಾನಿ ಮೋದಿ ಭೇಟಿಯಾಗಿದ್ದ ಸಿಎಂ ಯಡಿಯೂರಪ್ಪ ಇಂದು ಬೆಳಿಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ರಕ್ಷಣಾ ಸಚಿವ ರಾಜನಾಥ್ ಭೇಟಿಯಾಗಿದ್ದರು. ಬಳಿಕಅಮಿತ್ ಶಾ ಭೇಟಿಗೆ ನಿರ್ಧರಿಸಿದ್ದರು. ಆದರೆ ಕಾಲಾವಕಾಶ ಸಾಧ್ಯವಾಗದೇ ಬೆಂಗಳೂರಿಗೆ ಹಿಂದಿರುಗಲು ಏರ್ ಪೋರ್ಟ್ ಗೆ ಬಂದಿದ್ದರು. ಅಷ್ಟರಲ್ಲಿ ಮತ್ತೆ ಅಮಿತ್ ಶಾ ಸಿಎಂ ಯಡಿಯೂರಪ್ಪನವರಿಗೆ ಕರೆ ಮಾಡಿ ಬುಲಾವ್ ನೀಡಿದ್ದಾರೆ.

Related Articles

ಈ ಹಿನ್ನೆಲೆಯಲ್ಲಿ ಏರ್ ಪೊರ್ಟ್ ನಿಂದ ವಾಪಸ್ ಅಮಿತ್ ಶಾ ನಿವಾಸಕ್ಕೆ ತೆರಳಿರುವ ಯಡಿಯೂರಪ್ಪ ಶಾ ಭೇಟಿಯಾಗಿ ಸಮಾಲೋಚನೆ ನಡೆಸಿದ್ದಾರೆ.

ಅಮಿತ್ ಶಾ ನಿವಾಸದಲ್ಲಿ ಸಭೆ ನಡೆಯುತ್ತಿದೆ.

Home add -Advt

Related Articles

Back to top button