Kannada NewsKarnataka NewsLatest

*ಭೀಕರ ಅಪಘಾತ: ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಟಿಟಿ ವಾಹನ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಸುಣ್ಣಕಲ್ಲು ಕ್ರಾಸ್ ಬಳಿ ಈ ಫ಼್ದುರಂತ ಸಂಭವಿಸಿದೆ. ದಂಪತಿ ಮೃತರು ಆಂಧ್ರಪ್ರದೇಶದ ಅನ್ನಮಯ ಜಿಲ್ಲೆಯವರೆಂದು ತಿಳಿದುಬಂದಿದೆ. ಸ್ವಗ್ರಾಮದಿಂದ ಬೆಂಗಳೂರಿಗೆ ಬೈಕ್ ಗೆ ಕೆಲಸಕ್ಕೆಂದು ತೆರಳುತ್ತಿದ್ದರು.

ಮೃತ ದಂಪತಿಯನ್ನು ರಾಮಾಂಜಲು ಹಾಗೂ ಕಲಾವತಿ ಎಂದು ಗುರುತಿಸಲಾಗಿದೆ. ರಾಯಲ್ಪಾಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button