Latest

ನಿರ್ದೇಶಕ ಎಸ್.ನಾರಾಯಣ್-ಡಿ.ಕೆ.ಶಿವಕುಮಾರ್ ಭೇಟಿ; ಕಾಂಗ್ರೆಸ್ ಸೇರಲು ಒಲವು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ಯಾಂಡಲ್ ವುಡ್ ಖ್ಯಾತ ನಿರ್ದೇಶಕ ಎಸ್.ನಾರಾಯಣ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದು, ಕಲಾ ಸಾಮ್ರಾಟ್ ನಡೆ ಕುತೂಹಲ ಮೂಡಿಸಿದೆ.

ಎಸ್.ನಾರಾಯಣ್ ರಾಜಕೀಯಕ್ಕೆ ಎಂಟ್ರಿಕೊಡಲು ಸಜ್ಜಾಗಿದ್ದಾರೆ ಎಂಬ ಮಾಹಿತಿ ಇತ್ತೀಚೆಗೆ ಕೇಳಿಬಂದಿತ್ತು. ಬಿಜೆಪಿಗೆ ಸೇರುತ್ತಾರೆ, ಜೆಡಿಎಸ್ ಗೆ ಸೇರುತ್ತಾರೆ ಎಂಬ ಬಗ್ಗೆ ಚರ್ಚೆ ಕೂಡ ನಡೆದಿತ್ತು. ಆದರೀಗ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿರುವ ಎಸ್ ನಾರಾಯಣ್, ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ ಎನ್ನಲಾಗಿದೆ.

Home add -Advt

ಈ ಕುರಿತು ಫೇಸ್ ಬುಕ್ ನಲ್ಲಿ ಪ್ರಕಟಿಸಿರುವ ಡಿ.ಕೆ.ಶಿವಕುಮಾರ್, ನಿರ್ದೇಶಕ ಎಸ್.ನಾರಾಯಣ್ ತಮ್ಮನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ನಮ್ಮ ಪಕ್ಷದ ಆದರ್ಶ, ಸಿದ್ಧಾಂತಗಳಿಂದ ಪ್ರೇರೇಪಿತರಾಗಿ ಇಂದು ನಮ್ಮನ್ನು ಭೇಟಿಯಾಗಿದ್ದು, ಕಾಂಗ್ರೆಸ್ ಸೇರುವ ಅಭಿಲಾಷೆ ವ್ಯಕ್ತಪಡಿಸಿದರು. ಈ ಕುರಿತು ಅವರೊಂದಿಗೆ ಮಾತುಕತೆ ನಡೆಸಿದೆ ಎಂದು ತಿಳಿಸಿದ್ದಾರೆ.
ಐಪಿಎಸ್ ಅಧಿಕಾರಿ ರವಿ ಚನ್ನಣ್ಣನವರ್ ಮತ್ತೇಕೆ ಸುದ್ದಿಯಲ್ಲಿದ್ದಾರೆ? ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ?

Related Articles

Back to top button