Kannada NewsKarnataka News

*ಚಳಿ ಜೊತೆ ಮೂರು ದಿನ ಹಲವು ಜಿಲ್ಲೆಯಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ದ್ವಿತ್ವಾ ಚಂಡಮಾರುತದ ಪ್ರಭಾವದಿಂದ  ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ.

ದಿತ್ವಾ ಚಂಡಮಾರುತದ ಹಿನ್ನೆಲೆ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವೆಡೆ ಹಗುರ ಮಳೆಯಾಗುವ ಮುನ್ಸೂಚನೆ ನೀಡಿದೆ. ಜೊತೆಗೆ ಹಗಲಿನಲ್ಲಿ ಗರಿಷ್ಠ ಉಷ್ಣಾಂಶ ಗಣನೀಯವಾಗಿ ಇಳಿಮುಖವಾಗುವ ಸಾಧ್ಯತೆಯಿದೆ ಎಂದು ಹೇಳಿದೆ.

ದಕ್ಷಿಣ ಒಳನಾಡು ಕರಾವಳಿ ಜಿಲ್ಲೆಗಳಿಗೆ ಹಗುರ ಮಳೆಯ ಮುನ್ಸೂಚನೆ ನೀಡಿದ್ದರೆ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ದಕ್ಷಿಣ ಕನ್ನಡ, ಉಡುಪಿಯ ಕೆಲವೆಡೆ ಸಾಧಾರಣ ಮಲೆಯಾಗಲಿದೆ ಎಂದು ತಿಳಿಸಿದೆ.

ಅಲ್ಲದೇ ಮುಂದಿನ ಮೂರು ದಿನಗಳ ಕಾಲ ಚಳಿಯ ವಾತಾವರಣ ಮುಂದುವರೆಯಲಿದೆ. ಬೆಂಗಳೂರಲ್ಲಿ ಗರಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯಲಿದೆ ಎಂದು ಬೆಂಗಳೂರು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Related Articles

Back to top button