Kannada NewsKarnataka NewsLatest

*ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ: ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಇಂದಿನಿಂದ ಆಗಸ್ಟ್ 3ರವರೆಗೆ ಕರ್ನಾಟಕದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ನೀಡಿದೆ.

Home add -Advt

ಇವತ್ತು ಮತ್ತು ನಾಳೆ ರಾಜ್ಯದ ಬೆಂಗಳೂರು, ಕೋಲಾರ, ಮೈಸೂರು, ಮಂಡ್ಯ ಶಿವಮೊಗ್ಗ ದಾವಣಗೆರೆ, ಬಳ್ಳಾರಿ, ಗದಗ, ಧಾರವಾಡ, ಬೆಳಗಾವಿ, ವಿಜಯಪುರ, ಕಲಬುರಗಿ ಸೇರಿ 12 ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದ್ದು ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ.

ಹಾಗೆಯೇ ಆಗಸ್ಟ್ 2 ಮತ್ತು 3 ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದ‌ರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಹಾಗೂ ಬಳ್ಳಾರಿ ಮತ್ತು ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ ಮೈಸೂರು, ರಾಮನಗರ, ಶಿವಮೊಗ್ಗ ತುಮಕೂರು, ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಇನ್ನು ಆಗಸ್ಟ್ 5ರ ಬಳಿಕ ಮುಂಗಾರು ಕ್ಷೀಣಿಸುವ ಸಾಧ್ಯತೆ ಇದೆ.ಆಗಸ್ಟ್ 12ರವರೆಗೆ ಕರ್ನಾಟಕ ರಾಜ್ಯಾದ್ಯಂತ ಮಳೆಯ ಪ್ರಮಾಣ ವಾಡಿಕೆಗಿಂತ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ರೆ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರಿನಲ್ಲಿ ಅಲ್ಲಲ್ಲಿ ಇನ್ನು 1 ವಾರ ಉತ್ತಮ ಮಳೆ ಆಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಹೇಳಿದೆ.

Related Articles

Back to top button