Latest

ಬೆಂಗಳೂರು ವಿವಿ ನಿವೃತ ಪ್ರೊಫೆಸರ್ ಆತ್ಮಹತ್ಯೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ನಿವೃತ್ತ ಪ್ರೊಫೆಸರ್ ಅಶೋಕ್ ಕುಮಾರ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಮೈಕೋಲೇಔಟ್ ನಲ್ಲಿ ನಡೆದಿದೆ.

ತಾವು ವಾಸವಿದ್ದ ಮನೆಯಲ್ಲಿಯೇ ಅಶೋಕ್ ಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೂ ಮುನ್ನ ಬರೆದ ಡೆತ್ ನೋಟ್ ಕೂಡ ಪತ್ತೆಯಾಗಿದೆ.

Home add -Advt

ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದಿಟ್ಟಿದ್ದಾರೆ. ನಿವೃತ್ತ ಪ್ರೊಫೆಸರ್ ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಮೈಕೋಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button