Kannada NewsKarnataka NewsLatest

ಖಾನಾಪುರ ಬಳಿ 40 ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿ ಆಭರಣ ವಶ

ಪ್ರಗತಿವಾಹಿನಿ ಸುದ್ದಿ, ಖಾನಾಪುರ: ಸೂಕ್ತ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಚಿನ್ನ ಹಾಗೂ ಬೆಳ್ಳಿ ಆಭರಣಗಳನ್ನು ಕಾರಿನ ಸಮೇತ ನಂದಗಡ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಹಳಿಯಾಳದಿಂದ ಕಕ್ಕೇರಿಗೆ ಯಾವುದೇ ಬಿಲ್ ಇಲ್ಲದೆ ಈ ಆಭರಣಗಳನ್ನು ತರಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. 21,25,304 ರೂ. ಮೊತ್ತದ 395.7 ಗ್ರಾಮ್ ಚಿನ್ನ ಹಾಗೂ 19,08,420 ರೂ ಮೌಲ್ಯದ 28.065 ಕಿಲೋ ಬೆಳ್ಳಿಯನ್ನು ವಶಪಡಿಸಿಕೊಳ್ಳಲಾಗಿದೆ. ಜೊತೆಗೆ 13 ಲಕ್ಷ ರೂ. ಮೌಲ್ಯದ ಕಾರನ್ನೂ ಸೇರಿ 53,33,724 ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

Home add -Advt

ಚುನಾವಣೆ ಹಿನ್ನೆಲೆಯಲ್ಲಿ ಖಾನಾಪುರ ಕ್ಷೇತ್ರ ವ್ಯಾಪ್ತಿಯಲ್ಲಿ ತಪಾಸಣೆ ನಡೆಸುತ್ತಿರುವ ಸಂದರ್ಭದಲ್ಲಿ ಮಂಗಳವಾರ ಸಂಜೆ ಈ ವಸ್ತುಗಳು ಪತ್ತೆಯಾಗಿವೆ.

https://pragati.taskdun.com/excise-officersraidbelagavi/

Related Articles

Back to top button