
ಪ್ರಗತಿವಾಹಿನಿ ಸುದ್ದಿ: ಲಿಂಗಸಗೂರು ಕಾಂಗ್ರೆಸ್ ನಲ್ಲಿ ಬಣ ರಾಜಕೀಯ ಜೋರಾಗಿದೆ. ಮಾಜಿ ಶಾಸಕ ಡಿ.ಎಸ್.ಹೂಲಿಗೇರಿ ಹಾಗೂ ಎಂಎಲ್ ಸಿ ಶರಣಗೌಡ ಬಯ್ಯಾಪೂರ ಬಣಗಳ ನಡುವೆ ಬಡಿದಾಟ ಆರಂಭವಾಗಿದೆ.
ಕಾಂಗ್ರೆಸ್ ಎಂ ಎಲ್ ಸಿ ಶರಣಗೌಡ ಬಯ್ಯಾಪೂರ ಅವರ ಕಾರು ಅಡ್ಡಗಟ್ಟಿ ಅವರ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಗೋರೇಬಾಳ ಗ್ರಾಮದಲ್ಲಿ ನಡೆದಿದೆ.
ಲಿಂಗಸಗೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯಕ್ ಯಾರೂ ಅಂತಾ ಗೊತ್ತಿಲ್ಲ ಎಂದು ಶರಣಗೌಡ ಬಯ್ಯಾಪೂರ ಮಾಧ್ಯಮ ಹೇಳಿಕೆ ನೀಡಿದ್ದು, ಇಂದು ಅವರ ಕಾರನ್ನು ಅಡ್ಡಗಟ್ಟಿ ಅವರ ಆಪ್ತರ ಮೇಲೆ ಹಲ್ಲೆ ನಡೆಸಲಾಗಿದೆ. ಶರಣಗೌಡ ಮೇಲೂ ಹಲ್ಲೆಗೆ ಯತ್ನಿಸಿದ್ದಾರೆ. ಮಾಜಿ ಶಾಸಕ ಡಿ.ಎಸ್ ಹೂಲಿಗೇರಿ ಬೆಂಬಲಿಗರೇ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.