ಪ್ರಗತಿವಾಹಿನಿ ಸುದ್ದಿ; ಕರಾಚಿ: ಪಾಕಿಸ್ತಾನದ ಕರಾಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಪ್ರಯಾಣಿಕರ ವಿಮಾನ ಪತನಗೊಂಡಿದ್ದು, ಸಿಬ್ಬಂದಿ ಸೇರಿದಂತೆ ವಿಮಾನದಲ್ಲಿದ್ದ 107 ಪ್ರಯಾಣಿಕರು ಸಾವನ್ನಪ್ಪಿದ್ದಾರೆ.
ಜಿನ್ನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅತ್ಯಂತ ಸಮೀಪದ ಜನವಸತಿ ಪ್ರದೇಶದಲ್ಲಿ ವಿಮಾನ ಅಪಘಾತಕ್ಕೀಡಾಗಿದ್ದು, ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿರುವುದು ಆತಂಕಕ್ಕೆ ಕಾರಣವಾಗಿದೆ.
ಕರಾಚಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಳಿಯಲು ಕೇವಲ 5 ನಿಮಿಷಗಳು ಬಾಕಿ ಇರುವಾಗ ವಿಮಾನ ಅಪಘಾತಕ್ಕೀಡಾಗಿದ್ದು, ಜನವಸತಿ ಪ್ರದೇಶದ ಮೇಲೆ ವಿಮಾನ ಬಿದ್ದಿರುವುದು ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ.
PIA ಯPK 8303 ವಿಮಾನದಲ್ಲಿ 99 ಪ್ರಯಾಣಿಕರು ಹಾಗೂ 8 ಸಿಬ್ಬಂದಿ ಇದ್ದರು. ಕರಾಚಿ ವಿಮಾನ ನಿಲ್ದಾಣದಿಂದ ಸ್ವಲ್ಪ ದೂರದಲ್ಲಿರುವ ಮಾಲಿರ್‌ನ ಮಾಡೆಲ್ ಕಾಲೋನಿ ಬಳಿಯ ಜಿನ್ನಾ ಗಾರ್ಡ್‌ನ್ ವಸತಿ ಪ್ರದೇಶದಲ್ಲಿ ವಿಮಾನ ಅಪಘಾತಕ್ಕೀಡಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ