Kannada NewsPoliticsWorld

*ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ  ಯುದ್ಧಕ್ಕೆ 48 ಗಂಟೆಗಳ ಕದನ ವಿರಾಮ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವೆ ನಡೆಯುತ್ತಿರುವ ಯುದ್ಧಕ್ಕೆ 48 ಗಂಟೆಗಳ ಕದನ ವಿರಾಮವನ್ನು ಘೋಷಿಸಲಾಗಿದೆ.

ಗಡಿ ಘರ್ಷಣೆಗಳು ಎರಡೂ ಕಡೆಗಳಲ್ಲಿ ಸಾಕಷ್ಟು ಜೀವಗಳನ್ನು ಬಲಿ ಪಡೆದ ನಂತರ‌ ಕದನ ವಿರಾಮ ಘೋಷಣೆ ಮಾಡಲಾಗಿದೆ.‌

Home add -Advt

ಎರಡೂ ದೇಶಗಳ ಪರಸ್ಪರ ಒಪ್ಪಿಗೆಯೊಂದಿಗೆ ಪಾಕಿಸ್ತಾನ ಸರ್ಕಾರ ಮತ್ತು ಅಫ್ಘಾನಿಸ್ತಾನದ ತಾಲಿಬಾನ್ ಆಡಳಿತದ ನಡುವೆ ತಾತ್ಕಾಲಿಕ ಕದನ ವಿರಾಮವನ್ನು ನಿರ್ಧರಿಸಲಾಗಿದೆ.

ಆದರೆ, ಅಫ್ಘಾನ್ ಸರ್ಕಾರದಿಂದ ಈ ಬಗ್ಗೆ  ಯಾವುದೇ ಮಾಹಿತಿ ನೀಡಿಲ್ಲ. ಪಾಕಿಸ್ತಾನ ಸಶಸ್ತ್ರ ಪಡೆಗಳು ಅಫ್ಘಾನಿಸ್ತಾನದ ದಕ್ಷಿಣ ಕಂದಹಾರ್ ಪ್ರಾಂತ್ಯದಲ್ಲಿ ವೈಮಾನಿಕ ದಾಳಿ ನಡೆಸಿದ ನಂತರ ಕದನ ವಿರಾಮ ಘೋಷಿಸಲಾಯಿತು. 

ಅಫ್ಘಾನಿಸ್ತಾನ-ಪಾಕಿಸ್ತಾನ ಗಡಿಯ ಸಮೀಪವಿರುವ ಸ್ಪಿನ್ ಬೋಲ್ಡಕ್ ಜಿಲ್ಲೆಯ ವಸತಿ ಪ್ರದೇಶಗಳ ಮೇಲೆ ಈ ದಾಳಿಗಳು ನಡೆದಿದ್ದು, 15 ನಾಗರಿಕರು ಸಾವನ್ನಪ್ಪಿದ್ದಾರೆ. ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 100ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ.

Related Articles

Back to top button