Kannada NewsLatestSports

*ಭಾರತದ ವಿರುದ್ಧ ಪಂದ್ಯ ಆಡಲು ಪಾಕಿಸ್ತಾನ ಸಿದ್ಧ*

ಪ್ರಗತಿವಾಹಿನಿ ಸುದ್ದಿ: ಫೆಬ್ರವರಿ 15ರಂದು ನಡೆಯಲಿರುವ ಭಾರತದ ವಿರುದ್ಧದ ಟಿ20 ವಿಶ್ವಕಪ್ ಪಂದ್ಯ ಆಡಲು ನೀರಾಕರಿಸಿದ್ದ ಪಾಕಿಸ್ತಾನ  ಕ್ರಿಕೆಟ್ ತಂಡ ಇದೀಗ ಪಂದ್ಯ ಆಡಲು ಪಾಕಿಸ್ತಾನ ಸರ್ಕಾರ ಅನುಮತಿ ನೀಡಿದೆ. 

ಶ್ರೀಲಂಕಾ ಮತ್ತು ಬಾಂಗ್ಲಾದೇಶ ತಂಡಗಳು ಪಂದ್ಯಗಳಲ್ಲಿ ಭಾಗವಹಿಸಲು ಒಪ್ಪಿದ ಬಳಿಕ ಪಾಕಿಸ್ತಾನ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಸ್ನೇಹಪರ ರಾಷ್ಟ್ರಗಳ ಮನವಿಯ ಮೇರೆಗೆ ಭಾರತದ ವಿರುದ್ಧ ಪಂದ್ಯವಾಡಲು ಪಾಕಿಸ್ತಾನಕ್ಕೆ ಅನುಮತಿ ನೀಡಲಾಗಿದೆ ಎಂದು ಸರ್ಕಾರ ತಡರಾತ್ರಿ ಪ್ರಕಟಣೆ ಹೊರಡಿಸಿದೆ. ಇದರೊಂದಿಗೆ ಕಳೆದ ಹತ್ತು ದಿನಗಳಿಂದ ನಡೆಯುತ್ತಿದ್ದ ಗೊಂದಲಕ್ಕೆ ಕೊನೆ ಬಿದ್ದಿದೆ.

Home add -Advt

ಆಟದ ಹಿತದೃಷ್ಟಿಯಿಂದ ಬಹಿಷ್ಕಾರ ನಿರ್ಧಾರವನ್ನು ಹಿಂಪಡೆಯುವಂತೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಅಧ್ಯಕ್ಷ ಅಮಿನುಲ್ ಇಸ್ಲಾಂ ಅವರು ಪಾಕಿಸ್ತಾನಕ್ಕೆ ಮನವಿ ಮಾಡಿದ್ದರು. ಜೊತೆಗೆ, ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸಾನಾಯಕೆ ಅವರು ಪಾಕಿಸ್ತಾನ ಪ್ರಧಾನಿ ಶಹಬಾಜ್ ಶರೀಫ್ ಅವರಿಗೆ ಕರೆ ಮಾಡಿ ಬಹಿಷ್ಕಾರ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದ್ದರು.

ಈ ಒತ್ತಡಗಳ ನಂತರ ಪಾಕಿಸ್ತಾನ ಸರ್ಕಾರ ಅಂತಿಮ ತೀರ್ಮಾನ ಕೈಗೊಂಡಿದೆ. ಇದರೊಂದಿಗೆ ಭಾರತ-ಪಾಕಿಸ್ತಾನ ನಡುವಿನ ಎ ಗುಂಪಿನ ಪಂದ್ಯ ಕೊಲಂಬೋದಲ್ಲಿ ನಿಗದಿಯಂತೆ ನಡೆಯಲಿದೆ.

Related Articles

Back to top button