ಪ್ರಗತಿವಾಹಿನಿ ಸುದ್ದಿ; ಇಸ್ಲಾಮಾಬಾದ್: ಪಾಕಿಸ್ತಾನ ಸಂಸತ್ ನಲ್ಲಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ನಿರ್ಣಯ ತಿರಸ್ಕರಿಸಿದ ಕೆಲವೆ ಸಮಯದಲ್ಲಿ ಪಾಕಿಸ್ತಾನ ಸಂಸತ್ ವಿಸರ್ಜಿಸಲಾಗಿದೆ.
ಇಮ್ರಾನ್ ಖಾನ್ ವಿರುದ್ಧ ವಿಪಕ್ಷಗಳು ಅವಿಶ್ವಾಸ ಗೊತ್ತುವಳಿ ನಿರ್ಣಯ ಪ್ರಸ್ತಾಪ ಮಾಡುತ್ತಿದ್ದಂತೆ, ನಿರ್ಣಯ ಪ್ರಸ್ತಾಪವನ್ನೇ ಸ್ಪೀಕರ್ ಆರೀಫ್ ಅಲ್ವಿ ವಜಾಗೊಳಿಸಿ ಆದೇಶಿಸಿದ್ದರು. ಅವಿಶ್ವಾಸ ನಿರ್ಣಯ ತಿರಸ್ಕರಿಸುತ್ತಿದ್ದಂತೆ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಇಮ್ರಾನ್ ಖಾನ್, ನನ್ನ ವಿರುದ್ಧ ವಿದೇಶಿ ಷಡ್ಯಂತ್ರ ನಡೆಯುತ್ತಿದ್ದು, ಇದಕ್ಕೆ ಅವಕಾಶ ನೀಡುವುದಿಲ್ಲ. ಚುನಾಯಿತ ಸರ್ಕಾರವನ್ನು ಉರುಳಿಸಲು ಯತ್ನಿಸಲಾಗುತ್ತಿದೆ. ಇದು ಸಾಧ್ಯವಿಲ್ಲ. ಚುನಾವಣೆ ಎದುರಿಸಲು ದೇಶದ ಜನತೆ ಸಿದ್ಧರಾಗಿ ಎಂದು ಕರೆ ನೀಡಿದ್ದಾರೆ.
ಬಳಿಕ ಅಧ್ಯಕ್ಷ ಆರೀಫ್ ಅಲ್ವಿ ಅವರನ್ನು ಭೇಟಿಯಾದ ಇಮ್ರಾನ್ ಖಾನ್, ಸಂಸತ್ ವಿಸರ್ಜನೆ ಮಾಡುವಂತೆ ಮನವಿ ಮಾಡಿದ್ದಾರೆ. ಇದರ ಬೆನ್ನಲ್ಲೇ ಪಾಕಿಸ್ತಾನ ಅಧ್ಯಕ್ಷ ಆರಿಫ್ ಅಲ್ವಿ ಸಂಸತ್ ವಿಸರ್ಜಿಸಿದ್ದು, 90 ದಿನಗಳ ಒಳಗಾಗಿ ಚುನಾವಣೆ ನಡೆಸುವಂತೆ ಸೂಚನೆ ನೀಡಿದ್ದಾರೆ.
ಇಮ್ರಾನ್ ಖಾನ್ ವಿರುದ್ಧದ ಅವಿಶ್ವಾಸ ನಿರ್ಣಯ ವಜಾ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ