Latest

ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಗೆ ಕೊರೊನಾ ದೃಢ

ಪ್ರಗತಿವಾಹಿನಿ ಸುದ್ದಿ; ಇಸ್ಲಾಮಾಬಾದ್: ಇತ್ತೀಚೆಗೆ ಕೊರೊನಾ ವ್ಯಾಕ್ಸಿನ್ ಪಡೆದುಕೊಂಡಿದ್ದ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಪಾಕಿಸ್ತಾನ ಆರೋಗ್ಯ ಸಚಿವ ಫೈಸಲ್ ಸುಲ್ತಾನ್ ಟ್ವಿಟರ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಮನೆಯಲ್ಲಿಯೇ ಐಸೋಲೇಟ್ ಆಗಿದ್ದಾರೆ ಎಂದು ಹೇಳಿದ್ದಾರೆ.

ಮೊನ್ನೆಯಷ್ಟೇ ಇಮ್ರಾನ್ ಖಾನ್ ಚೀನಾದ ಸಿನೋಫಾರ್ಮ್ ವ್ಯಾಕ್ಸಿನ್ ಪಡೆದುಕೊಂಡಿದ್ದರು. ವ್ಯಾಕ್ಸಿನ್ ಪಡೆದ 48 ಗಂಟೆಗಳಲ್ಲೇ ಕೊರೊನಾ ಪಾಸಿಟಿವ್ ಬಂದಿದೆ.

Related Articles

Back to top button