Latest

*ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ: ಉರಿಯಲ್ಲಿ ಗುಂಡಿನ ದಾಳಿ*

ಪ್ರಗತಿವಾಹಿನಿ ಸುದ್ದಿ: ಪಾಕಿಸ್ತಾನ ಸೇನೆ ಜಮ್ಮು-ಕಾಶ್ಮೀರದ ಗಡಿಯುದ್ದಕ್ಕೂ ಮತ್ತೆ ಮತ್ತೆ ಕದನವಿರಾಮ ಉಲ್ಲಂಘನೆ ಮಾಡುತ್ತಲೇ ಇದೆ. ನಿನ್ನೆ ಭಾರತದ 36 ಪ್ರದೇಶಗಳಲ್ಲಿ 300-400 ಡ್ರೋನ್ ದಾಳಿ ನಡೆಸಿದೆ. ಇದೆಲ್ಲವನ್ನೂ ಭಾರತೀಯ ಸೇನೆ ವಿಫಲಗೊಳಿಸಿದೆ. ಇದರ ಬೆನ್ನಲ್ಲೇ ಇಂದು ಮತ್ತೆ ದಾಳಿ ನಡೆಸಿದೆ.

ಉರಿ ಸೆಕ್ಟರ್ ನಲ್ಲಿ ಎಲ್ ಒಸಿ ಉದ್ದಕ್ಕೂ ಪಾಕಿಸ್ತಾನ ಮತ್ತೆ ಶಸ್ತ್ರಾಸ್ತ್ರ ಮತ್ತು ಫಿರಂಗಿ ಗುಂಡಿನ ದಾಳಿ ನಡೆಸಿದೆ. ಉರಿಯಲ್ಲಿ ಗುಂಡಿನ ದಾಳಿ, ಸ್ಫೋಟದ ಸದ್ದು ಕೇಳಿಬರುತ್ತಿದ್ದು, ಜನರು ಆತಂಕಕ್ಕೀಡಾಗಿದ್ದಾರೆ. ಪಾಕಿಸ್ತಾನ ದಾಳಿಗೆ ಭಾರತೀಯ ಸೇನೆ ಪ್ರತಿ ದಾಳಿ ನಡೆಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button