
ಪ್ರಗತಿವಾಹಿನಿ ಸುದ್ದಿ: ಪೊಲೀಸ್ ಠಾಣೆಯ ಮೇಲೆಯೇ ಉಗ್ರರು ಗ್ರೆನೇಡ್ ದಾಳಿ ನಡೆಸಿರುವ ಘಟನೆ ಪಾಕಿಸ್ತಾನದ ಇಸ್ಲಾಮಾಬಾದ್ ನಲ್ಲಿ ನಡೆದಿದೆ.
ಸ್ಥಳೀಯ ಪೊಲೀಸ್ ಠಾಣೆಯ ಮೇಲೆ ಉಗ್ರರು ಏಕಾಏಕಿ ಗ್ರೆನೇಡ್ ದಾಳಿ ನಡೆಸಿದ್ದು, ಘಟನೆಯಲ್ಲಿ 10 ಪೊಲೀಸರು ಮೃತಪಟ್ಟಿದ್ದಾರೆ. ಹಲವರು ಗಂಭೀರ ಗಾಯಗೊಂಡಿದ್ದಾರೆ. ಪೊಲೀಸ್ ಠಾಣೆ ಸಂಪೂರ್ಣ ಛಿದ್ರವಾಗಿದೆ.
ಪಾಕಿಸ್ತಾನದಲ್ಲಿ ಸಂಸತ್ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಉಗ್ರರು ಪೊಲೀಸ್ ಠಾಣೆಗಳನ್ನು ಗುರಿಯಾಗಿಸಿ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.