Latest

ಕ್ವಟ್ಟಾಯಂ ನಲ್ಲಿ ಬಾಂಬ್ ಸ್ಫೋಟ; ನಾಲ್ವರು ರಾಜಕೀಯ ಕಾರ್ಯಕರ್ತರು ಬಲಿ

ಪ್ರಗತಿವಾಹಿನಿ ಸುದ್ದಿ; ಇಸ್ಲಾಮಾಬಾದ್: ಪಾಕಿಸ್ತಾನದ ಕ್ವಾಟ್ಟಾಯಂ ನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ನಾಲ್ವರು ರಾಜಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದು, 13ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.

ರಾಜಕೀಯ ಸಮಾವೇಶದ ಬಳಿಕ ಇಸ್ಲಾಮಿಸ್ಟ್ ಪಕ್ಷದ ಕಾರ್ಯಕರ್ತರು ಸ್ಥಳದಿಂದ ಹೊರಹೋಗುತ್ತಿದ್ದ ವೇಳೆ ಬಾಂಬ್ ಸ್ಫೋಟ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. 1.5 ಕೆಜಿ ಸುಧಾರಿತ ಸ್ಫೋಟಕಗಳನ್ನು ಬಳಸಿ ಬಾಂಬ್ ಸ್ಫೋಟಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈವರೆಗೂ ಯಾವುದೇ ಸಂಘಟನೆಗಳು ಬಾಂಬ್ ಸ್ಫೋಟದ ಹೊಣೆ ಹೊತ್ತುಕೊಂಡಿಲ್ಲ ಎಂದು ತಿಳಿದುಬಂದಿದೆ.
ಅಪ್ರಾಪ್ತರ ಜೊತೆ ಅಪ್ರಾಪ್ತೆಯರು ಪರಾರಿ; ಪತ್ತೆಯಾಗಿದ್ದೆಲ್ಲಿ ಗೊತ್ತೆ?

Home add -Advt

Related Articles

Back to top button