World

*ಶಾಂತಿ ಸಮಿತಿ ಕಚೇರಿ ಮೇಲೆ ಬಾಂಬ್ ಸ್ಫೋಟ: 7 ಜನರು ಸಾವು*

ಪ್ರಗತಿವಾಹಿನಿ ಸುದ್ದಿ: ಪಾಕಿಸ್ತಾನದಲ್ಲಿ ಪ್ರಬಲ ಬಾಂಬ್ ಸ್ಫೋಟ ಸಂಭವಿಸಿದ್ದು 7 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಖೈಬರ್ ಪಖ್ತುಂಕ್ವಾ ಪ್ರಾಂತ್ಯದಲ್ಲಿ ಶಾಂತಿ ಸಮಿತಿ ಕಚೇರಿಯ ಮೇಲೆ ಬಾಂಬ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ 7 ಜನರು ಸಾವನ್ನಪ್ಪಿದ್ದಾರೆ. 16 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪಾಕಿಸ್ತಾನಿ ತಾಲಿಬಾನ್ ಅನ್ನು ಸಾರ್ವಜನಿಕವಾಗಿ ವಿರೋಧಿಸುವ ಶಾಂತಿ ಸಮಿತಿಯ ಕಚೇರಿಯನ್ನು ಗುರಿಯಾಗಿಸಿಕೊಂಡುಬಾಂಬ್ ದಾಳಿ ನಡೆಸಲಾಗಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button