Belagavi NewsBelgaum NewsKannada NewsKarnataka News

*ಕರ್ನಾಟಕದಲ್ಲಿ ಮುಂದುವರಿಯಲಿದೆ ಮಳೆ ಅಬ್ಬರ; ಹಲವೆಡೆ ಗುಡುಗು, ಮಿಂಚು ಸಹಿತ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಈಶಾನ್ಯ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಎರಡು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಮತ್ತು ಬಲವಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ರಾಜಧಾನಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲದೆ, ಚಾಮರಾಜನಗರ, ತುಮಕೂರು, ಕೋಲಾರ ಹಾಗೂ ಮೈಸೂರು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಇಂದು ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನೊಂದೆಡೆ, ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕಡಿಮೆಯಾಗಲಿದ್ದು, ಬೆಳಗಿನ ಸಮಯದಲ್ಲಿ ದಟ್ಟ ಮಂಜು ಆವರಿಸುವ ಸಾಧ್ಯತೆ ಇದೆ.

ಕರಾವಳಿ ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳ ಜೊತೆಗೆ ದಾವಣಗೆರೆ, ಕೊಡಗು, ಚಿಕ್ಕಬಳ್ಳಾಪುರ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಮುನ್ಸೂಚನೆ ಇದೆ.

ನಾಳೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ತುಮಕೂರು, ಕೋಲಾರ ಹಾಗೂ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಬಿಸಿಲು ಮತ್ತು ಶುಷ್ಕ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button