
ಪ್ರಗತಿವಾಹಿನಿ ಸುದ್ದಿ: ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹತ್ಯೆಯಾಗಿರುವ ಬಗ್ಗೆ ವರದಿಯಾಗಿದೆ.
ಜೈಲುಶಿಕ್ಷೆ ಅನುಭವಿಸುತ್ತಿದ್ದ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಜೈಲಿನಲ್ಲಿಯೇ ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನದ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆ ಇಮ್ರಾಮ್ ಕುಟುಂಬ ಸದಸ್ಯರು ಜೈಲಿಗೆ ತೆರಳಿದಾಗ ಭೇಟಿಗೆ ಅವಕಾಶ ನೀಡಿಲ್ಲ. ಪಾಕಿಸ್ತಾನ ಸರ್ಕಾರ ಕೂಡ ಇಮ್ರಾನ್ ಖಾನ್ ಆರೋಗ್ಯದ ಬಗ್ಗೆ ಯಾವುದೇ ಮಾಹಿತಿ ನೀಡುತ್ತಿಲ್ಲ ಎನ್ನಲಾಗಿದೆ.
ಇಮ್ರಾನ್ ಖಾನ್ ಹತ್ಯೆ ಸುದ್ದಿ ಬೆನ್ನಲ್ಲೇ ರಾವಲ್ಪಿಂಡಿಯ ಅದಿಯಾಲಾ ಜೈಲಿನ ಮುಂದೆ ಪಿಟಿಐ ಪಕ್ಷದ ಕಾರ್ಯಕರ್ತರು, ಇಮ್ರಾನ್ ಖಾನ್ ಬೆಂಬಲಿಗರು ಸೇರುತ್ತಿದ್ದು, ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಇನ್ನೊಂದೆಡೆ ಇಮ್ರಾನ್ ಸಹೋದರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

