ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಪಾಕಿಸ್ತಾನದ ಕರಾಚಿಯಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಸ್ಟಾಕ್ ಎಕ್ಸ್ಚೇಂಜ್ ಕಚೇರಿ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸೇರಿದಂತೆ ನಾಲ್ವರು ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ.
ಉಗ್ರರ ದಾಳಿಯಲ್ಲಿ ಹತರಾಗುವ ಮುನ್ನ ಪೊಲೀಸರು ಪ್ರತಿದಾಳಿ ನಡೆಸಿದ್ದಾರೆ. ಉಗ್ರರು ಕರಾಚಿಯ ಸ್ಟಾಕ್ ಎಕ್ಸ್ಚೇಂಜ್ ಆವರಣದಲ್ಲಿರುವ ಜನರ ಮೇಲೆ ದಾಳಿ ನಡೆಸಲು ಮುಂದಾದಾಗ ಪೊಲೀಸರು ಫೈರ್ ಮಾಡಿದ್ದಾರೆ. ಪೊಲೀಸರು ಪ್ರತಿದಾಳಿಯಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ್ಧಾರೆ.
ಉಗ್ರರ ದಾಳಿ ಮತ್ತು ಭದ್ರತಾ ಸಿಬ್ಬಂದಿಗಳ ಪ್ರತಿದಾಳಿಯಲ್ಲಿ ನಾಲ್ವರು ಉಗ್ರರು ಮತ್ತು ಓರ್ವ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹಾಗೂ ನಾಲ್ಕು ಮಂದಿ ಭದ್ರತಾ ಸಿಬ್ಬಂದಿ ಸೇರಿ ಒಟ್ಟು 9 ಮಂದಿ ಸಾವನ್ನಪ್ಪಿದ್ದಾರೆ. ಗಾಯಗೊಂಡಿದ್ದ 7 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ನಾಲ್ವರು ಉಗ್ರರು ಸ್ಟಾಕ್ ಎಕ್ಸ್ಚೇಂಜ್ ಕೇಂದ್ರಕ್ಕೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದರು. ಈ ಮುನ್ನ ಪ್ರವೇಶ ದ್ವಾರದ ಮೇಲೆ ಗ್ರೆನೇಡ್ ದಾಳಿ ನಡೆಸಿದರು. ನಂತರ ಸ್ಟಾಕ್ ಎಕ್ಸ್ಚೇಂಜ್ ಕೇಂದ್ರಕ್ಕೆ ಪ್ರವೇಶಿಸಲು ಮುಂದಾದಾಗ ಭಯೋತ್ಪಾದಕರು ಹಾಗೂ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ