ಪ್ರಗತಿವಾಹಿನಿ ಸುದ್ದಿ; ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೆಜ್ ಮುಷರಫ್ ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು.
ಸುದೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪರ್ವೇಜ್ ಮುಷರಫ್, ರಾವಲಪಿಂಡಿಯ ಸೇನಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಅಮಿಲೋಡೋಸಿಸ್ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ಪರವೇಜ್ ಮುಷರಫ್, 2016ರಿಂದ ದುಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ಅವರನ್ನು ಪಾಕಿಸ್ತಾನದ ರಾವಲ್ಪಿಂಡಿಯ ಆರ್ಮ್ಡ್ ಫೋರ್ಸಸ್ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ಮುಷರಫ್ ಕೊನೆಯುಸಿರೆಳೆದಿದ್ದಾರೆ.
ಪಾಕಿಸ್ತಾನ ಮಾಜಿ ಸೇನಾ ಮುಖ್ಯಸ್ಥರಾಗಿದ್ದ ಪರ್ವೇಜ್ ಮುಷರಫ್, 1999ರಲ್ಲಿ ಭಾರತದ ಕಾರ್ಗಿಲ್ ಮೇಲೆ ಪಾಕ್ ಸೇನೆ ಆಕ್ರಮಣ ಮಾಡಲು ಪ್ರಮುಖ ಕಾರಣರಾಗಿದರು. ಯುದ್ಧದಲ್ಲಿ ಪಾಕ್ ಸೇನೆ ಸೋಲನುಭವಿಸಿತ್ತು. ಬಳಿಕ ಆಗಿನ ಪ್ರಧಾನಿ ನವಾಜ್ ಷರೀಫ್ ಸರ್ಕಾರ ಉರುಳಿಸಿ ಪಾಕಿಸ್ತಾನದ ಅಧ್ಯಕ್ಷರಾಗಿ 2001ರಿಂದ 2008ರವರೆಗೆ ಆಡಳಿತ ನಡೆಸಿದ್ದರು.
*ಸಿಎಂ ಬೊಮ್ಮಾಯಿ ದಿಢೀರ್ ದೆಹಲಿಗೆ*
https://pragati.taskdun.com/cm-basavaraj-bommaidelhivisit/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ