*ಪಂಚ ಗ್ಯಾರಂಟಿ ಸಮೀಕ್ಷೆ: ವಿಡಿಯೋ ಕಾನ್ಫರೆನ್ಸ್ ನಡೆಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಪಂಚ ಗ್ಯಾರಂಟಿ ಯೋಜನೆಗಳ ಸಮೀಕ್ಷೆಯು ಇದೇ ಸೋಮವಾರದಿಂದ (ಫೆ.26) ಮಾರ್ಚ್ 3 ರವರೆಗೆ ರಾಜ್ಯಾದ್ಯಂತ ನಡೆಯಲಿದೆ. ಇದರಿಂದಾಗಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸ್ಪಷ್ಟ ಚಿತ್ರಣ ತಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.
ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಮೊಬೈಲ್/ವೆಬ್ ತಂತ್ರಾಂಶದ ಮೂಲಕ ಸಮೀಕ್ಷೆ (ಜಿಎಸ್‌ಎಸ್) ನಡೆಸುವ ಸಂಬಂಧ ಇಂದು ವಿಕಾಸ ಸೌಧದಿಂದ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ (ಸಿಇಒ) ವಿಡಿಯೋ ಕಾನ್ಫರೆನ್ಸ್ ನಡೆಸಲಾಯಿತು. ಯೋಜನೆಗಳು ತಲುಪಿರುವ ಮತ್ತು ತಲುಪದಿರುವ ಕುಟುಂಬಗಳ ಸರ್ವೆ ನಡೆಸುತ್ತಿದ್ದು, ಈ ಮೂಲಕ ಯೋಜನೆ ತಲುಪದ ಕುಟುಂಬಗಳ ಸಂಖ್ಯೆ ಮತ್ತು ಕಾರಣ ತಲುಪಲಿದೆ ಎಂದರು.
ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ಸರ್ವೆ ಕಾರ್ಯ ನಡೆಸಲಿದ್ದು, ಯೋಜನೆಯ ಲಾಭ ಪಡೆದಿರುವ ಹಾಗೂ ಪಡೆಯದ ಕುಟುಂಬಗಳ ಮಾಹಿತಿ ಸಂಗ್ರಹಿಸಲಿದ್ದಾರೆ ಎಂದು ಸಚಿವರು ತಿಳಿಸಿದರು.
ಈ ವೇಳೆ ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಡಾ.ಜಿ.ಸಿ.ಪ್ರಕಾಶ್, ನಿರ್ದೇಶಕರಾದ ಎಂ.ಎಸ್.ಅರ್ಚನಾ ಸೇರಿದಂತೆ ಇ-ಗವರ್ನೆಸ್ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ