ಪ್ರಗತಿವಾಹಿನಿ ಸುದ್ದಿ : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಂದ ಆಗುತ್ತಿರುವ ಆರ್ಥಿಕ ಹೊರೆ ನೀಗಿಸಲು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳು ಹಾಗೂ ತೆರಿಗೆ ಸಂಗ್ರಹ ಏರಿಕೆಯ ಗುರಿ ವಿಚಾರ ಸಂಬಂಧ ಸಿಎಂ ಸಿದ್ದರಾಮಯ್ಯ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಆರ್ಥಿಕ ಇಲಾಖೆಯ ಅಧಿಕಾರಿಗಳ ಜೊತೆಗೆ ಮಹತ್ವದ ಸಭೆ ನಡೆಸಿದರು.
ಗ್ಯಾರಂಟಿ ಯೋಜನೆಗಳ ಪರಿಶೀಲನೆ ಕುರಿತು ಹಾಗೂ ಅರ್ಹ ಫಲಾನುಭವಿಗಳಿಗೆ ಮಾತ್ರ ಯೋಜನೆಗಳು ತಲುಪಬೇಕು ಎಂಬ ಕೆಲ ಸಚಿವರ ಅಭಿಪ್ರಾಯದ ಹಿನ್ನೆಲೆಯಲ್ಲಿ ಸಿಎಂ ಈ ಸಭೆಯನ್ನು ಮಾಡಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಆಗುತ್ತಿರುವ ಆರ್ಥಿಕ ಹೊರೆ ಕುರಿತು ಮಹತ್ವದ ಸವಾಲುಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ತಿಳಿದುಬಂದಿದೆ.
ತೆರಿಗೆ ಸಂಗ್ರಹದ ಗುರಿ ವಿಚಾರ ಮಾತ್ರವಲ್ಲ ಗ್ಯಾರಂಟಿ ಯೋಜನೆಗಳನ್ನು ಯಾವ ರೀತಿ ಪರಿಷ್ಕರಣೆ ಮಾಡಬೇಕು ಎಂಬುವುದರ ಬಗ್ಗೆಯೂ ಅಭಿಪ್ರಾಯ ಪಡೆದುಕೊಂಡಿದ್ದಾರಂತೆ. ಸಭೆಯಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿ ಇಲಾಖೆಯ ಹಿರಿಯ ಅಧಿಕಾರಿಗಳು ಇದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ