ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮತ್ತೆ ಗಡುವು ಕೇಳಿದ್ದಾರೆ ಎಂದು ತಿಳಿದುಬಂದಿದೆ.
ಸಚಿವ ಸಂಪುಟ ಸಭೆ ಬಳಿಕ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಪಂಚಮಸಾಲಿ ಸಮಾಜದ ಮುಖಂಡರ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ಕಾನೂನು ತಜ್ಞರ ಸಲಹೆ ಪಡೆದು ಶೀಘ್ರದಲ್ಲಿ ನಿರ್ಧಾರ ಪ್ರಕಟಿಸಲಾಗುವುದು ಹೋರಾಟ ಕೈಬಿಡುವಂತೆ ಮನವೊಲಿಸಲು ಯತ್ನಿಸಿದ್ದಾರೆ.
ಅಲ್ಲದೇ 10 ದಿನಗಳ ಕಾಲಾವಕಾಶ ನೀಡಿ ನಿಮ್ಮ ಸಮಸ್ಯೆ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಆದರೆ ಸಿಎಂ ಮಾತಿಗೆ ಒಪ್ಪದ ಸಮಾಜದ ಮುಖಂಡರು ಮತ್ತೆ ಗಡುವು ನಿಡಲು ಸಾಧ್ಯವಿಲ್ಲ. ರಾಜ್ಯದ ಮೂಲೆ ಮೂಲೆಗಳಿಂದ ಸಮಾವೇಶಕ್ಕೆ ಜನರು ಬಂದಿದ್ದಾರೆ. ಮೀಸಲಾತಿ ಘೋಷಣೆಗಾಗಿ ಕಾದಿದ್ದಾರೆ. ಸಮಾವೇಶದ ವೇದಿಕೆಯಲ್ಲಿಯೇ ಸಮಾಜದ ನಿರ್ಧಾರವನ್ನು ಹೇಳುತ್ತೇವೆ ಎಂದು ಹೇಳಿ ಸಭೆಯಿಂದ ನಿರ್ಗಮಿಸಿದ್ದಾರೆ ಎಂದು ತಿಳಿದುಬಂದಿದೆ.
*ಮತ್ತೊಂದು ನರಗುಂದ ಬಂಡಾಯವಾಗಲು ಅವಕಾಶ ಕೊಡಬೇಡಿ; ಬಸವಜಯ ಮೃತ್ಯುಂಜಯ ಸ್ವಾಮೀಜಿ*
https://pragati.taskdun.com/panchamasali-2a-reservationsamaveshabasavajaya-mrityunjaya-swamiji/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ