Latest

*ಪಂಚಮಸಾಲಿ ಮೀಸಲಾತಿ ವಿವಾದ; ವಿಜಯಾನಂದ ಕಾಶಪ್ಪನವರ್ ರಾಜಿನಾಮೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಕೇವಲ ಶೇ.7ರಷ್ಟು ಮೀಸಲಾತಿಯನ್ನು ಒಪ್ಪಲು ಸಾಧ್ಯವಿಲ್ಲ. ಇದು ಚುನಾವಣೆಗೋಸ್ಕರ ಮಾಡಿರುವ ತಂತ್ರ ಎಂಬುದು ಗೊತ್ತಾಗುತ್ತಿದೆ ಎಂದು ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಪಂಚಮಸಾಲಿ ಸಮುದಾಯದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ವಿಜಯಾನಂದ ಕಾಶಪ್ಪನವರ್, ನಿನ್ನೆ ರಾಜ್ಯ ಸರ್ಕಾರ ಪಂಚಮಸಾಲಿ ಸಮುದಾಯಕ್ಕೆ 2D ಎಂಬ ಹೆಸರಿನಡಿ ಶೇ.7ರಷ್ಟು ಮೀಸಲಾತಿ ಘೋಷಣೆ ಮಾಡಿದೆ. ಈ ಮೀಸಲಾತಿಯನ್ನು ಒಪ್ಪಲು ಸಾಧ್ಯವಿಲ್ಲ ಎಂದರು.

ನಾವು ಕೇಳಿದ್ದು ಶೇ.15ರಷ್ಟು ಮೀಸಲಾತಿ. ಆದರೆ ರಾಜ್ಯ ಸರ್ಕಾರ ಕಳೆದ ನಾಲ್ಕು ವರ್ಷಗಳಿಂದ ಮೀಸಲಾತಿ ಹೆಚ್ಚಿಸದೇ ಈಗ ಚುನಾವಣಾ ತಂತ್ರ ಎಂಬಂತೆ ಕೇವಲ 7ರಷ್ಟು ಮೀಸಲಾತಿ ನೀಡಿದೆ. ನಾವು ಹೇಳಿದಷ್ಟು ಮೀಸಲಾತಿ ನೀಡದಿದ್ದರೆ ಸರ್ಕಾರದ ಕ್ರಮವನ್ನು ನಾವು ಒಪ್ಪುವುದಿಲ್ಲ ಎಂದು ಹೇಳಿದರು.

ಸರ್ಕಾರದ ಕ್ರಮದಿಂದಾಗಿ ಬೇಸರಗೊಂಡು ಪಂಚಮಸಾಲಿ ಸಮುದಾಯದ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತೇನೆ ಎಂದು ಘೋಷಿಸಿದ್ದಾರೆ.

Home add -Advt

https://pragati.taskdun.com/https-pragativahini-com-panchamasali-2d-reservationvijayananda-kashappanavarresign/


Related Articles

Back to top button