Karnataka NewsLatest

*ಪಂಚಮಸಾಲಿ ಮುಖಂಡರಿಗೆ ಬೆದರಿಕೆ ಕರೆ: ಸ್ವಾಮೀಜಿ ಗಂಭೀರ ಆರೋಪ*

ಪ್ರಗತಿವಾಹಿನಿ ಸುದ್ದಿ: ಪಂಚಮಸಾಲಿ ಸಮುದಾಯದ ಮುಖಂಡರಿಗೆ ಸಿಎಂ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಬೆದರಿಕೆ ಹಾಕುವ ಕೆಲಸ ನಡೆಯುತ್ತಿದೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಆರೋಪಿಸಿದ್ದಾರೆ.

ಬಾಗಲಕೋಟೆಯ ಬನಹಟ್ಟಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ವಾಮೀಜಿ, 2ಎ ಮೀಸಲಾತಿಗಾಗಿ ಹೋರಾಟ ನಡೆಸುತ್ತಿರುವ ಪಂಚಮಸಾಲಿ ಸಮುದಾಯದ ಮುಖಂಡರಿಗೆ ಬೆದರಿಕೆ ಕರೆಗಳು ಬರುತ್ತಿವೆ. ಕಳೆದ ನಾಲ್ಕು ದಿನಗಳಿಂದ ಪಂಚಮಸಾಲಿ ತಾಲೂಕು ಘಟಕದ ಅಧ್ಯಕ್ಷರು, ಜಿಲ್ಲಾ ಘಟಕದ ಅಧ್ಯಕ್ಷರಿಗೆ ಕರೆ ಮಾಡಿ ಕೆಲವರು ಬೆದರಿಕೆ ಹಾಕಿದ್ದಾರೆ ಎಂದು ಹೇಳಿದರು.

ಈ ಹಿಂದೆ ಬಸವರಾಜ್ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿಯೂ ನಾವು ಹೋರಾಟ ನಡೆಸಿದ್ದೆವು. ಅಂದು ನಾವು ಬೊಮ್ಮಾಯಿ ಅವರ ಮನೆ ಮುಂದೆ ಹೋರಾಟ ಮಾಡಿದ್ದೆವು. ಆದರೂ ನಮ್ಮ ಮೇಲೆ ಒಂದೇ ಒಂದು ಕೇಸ್ ಸಹ ದಾಖಲಾಗಿರಲಿಲ್ಲ. ಆದರೆ ಈಗ ಸಿದ್ದರಾಮಯ್ಯನವರ ಸರ್ಕಾರದಲ್ಲಿ ನಮ್ಮ ಮುಖಂಡರಿಗೆ ಬೆದರಿಕೆ ಹಾಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಬೆದರಿಕೆಯಿಂದ ಏನಾದರೂ ಆದರೆ ರಕ್ತ ಕ್ರಾಂತಿ ನಡೆಯುತ್ತೆ. ಶಾಸಕರು, ಸಂಸದರು ಯಾರೇ ಇರಲಿ ಸುಮ್ಮನೆ ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button