
ಪ್ರಗತಿವಾಹಿನಿ ಸುದ್ದಿ: ಬಸವ ಜಯಮೃತ್ಯುಂಜಯ ಸ್ವಾಮೀಜಿಯನ್ನು ಬಾಗಲಕೋಟೆಯ ಕೂಡಲಸಂಗಮ ಪಂಚಮಸಾಲಿ ಮಠದ ಪೀಠಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಮಾಡಿದ ಬಳಿಕ ಇದೀಗ ಮಠಕ್ಕೆ ಬೀಗ ಜಡಿಯಲಾಗಿದೆ.
ಭಾನುವಾರ ಪಂಚಮಸಾಲಿ ಟ್ರಸ್ಟ್ ನ ಕಾರ್ಯಕಾರಿಣಿ ಸಭೆ ನಡೆಸಲಾಗಿತ್ತು. ಈ ಸಭೆಯಲ್ಲಿ ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಉಚ್ಛಾಟನೆ ಮಾಡಲಾಗಿತ್ತು.
ಬಸವ ಜಯಮೃತ್ಯುಂಜಯ ಸ್ವಾಮೀಜಿ ಸಿಡಿ ಎಲ್ಲೆಲ್ಲಿ ಹೋಗಿವೆ ಅವೆಲ್ಲವನ್ನೂ ಬೆಳಕಿಗೆ ತರುತ್ತೇವೆ. ಅಷ್ಟೇ ಅಲ್ಲ ಸ್ವಾಮೀಜಿ ಎಲ್ಲೆಲ್ಲಿ ಆಸ್ತಿ ಮಾಡಿದ್ದಾರೆ ಎಲ್ಲಾ ದಾಖಲೆಗಳನ್ನು ಹುಡುಕುತ್ತೇವೆ, ಇನ್ಮುಂದೆ ಅವರಿಗೆ ಹಾಗೂ ಈ ಪೀಠಕ್ಕೂ ಯಾವುದೇ ಸಂಬಂಧವಿಲ್ಲ. ಅವರಿಗೆ ಸ್ವಾಭಿಮಾನ, ಸಂಸ್ಕಾರವಿದ್ದರೆ ಈ ಮಠಕ್ಕೆ ಬಾರಬಾರದು ಎಂದು ಪಂಚಮಸಾಲಿ ಟ್ರಸ್ಟ್ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ತಿಳಿಸಿದ್ದಾರೆ.