*ಪಂಚಮಸಾಲಿ ಪ್ರತಿಭಟನೆ ವೇಳೆ ಬಿ.ವೈ.ವಿಜಯೇಂದ್ರಗೆ ಅವಮಾನ; ಭಾಷಣ ಅರ್ಧಕ್ಕೆ ನಿಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ*

ಪ್ರಗತಿವಾಹಿನಿ ಸುದ್ದಿ: ಪಂಚಮಸಾಲಿ ಹೋರಾಟದಲ್ಲಿ ಭಾಗಿಯಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರಿಗೆ ಅವಮಾನ ಮಡಲಾಗಿದ್ದು, ಪ್ರತಿಭಟನಾಕಾರರು ವಿಜಯೇಂದ್ರ ವಿರುದ್ಧ ಘೋಷಣೆ ಕೂಗಿದ್ದಾರೆ. 2ಎ ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಯದ ಮುಖಂಡರು, ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪಂಚಮಸಾಲಿ ಪ್ರತಿಭಟನಾ ಸಮಾವೇಶದಲ್ಲಿ ಭಾಗಿಯಾಗಿದ್ದ ವಿಜಯೇಂದ್ರ ಅವರ ಭಾಷಣದ ವೇಳೆ ಕೆಲವರು ವಿಜಯೇಂದ್ರ ವಿರುದ್ಧ ಘೋಷಣೆ ಕೂಗಿದ್ದಾರೆ. ಇದರಿಂದ ಇರಿಸುಮುರಿಸುಗೊಂಡ ವಿಜಯೇಂದ್ರ ಅರ್ಧಕ್ಕೆ ಭಾಷಣ ಮೊಟಕುಗೊಳಿಸಿದರು ಎಂದು ತಿಳಿದುಬಂದಿದೆ. *ಬಸವಜಯ ಮೃತ್ಯುಂಜಯ ಸ್ವಾಮೀಜಿ, ಯತ್ನಾಳ್ ಪೊಲೀಸ್ ವಶಕ್ಕೆ*