Politics

*ಪಂಚಮಸಾಲಿ ಹೋರಾಟ ಹತ್ತಿಕ್ಕಲು ಹಿಟ್ಲರ್ ಮಾರ್ಗ ಆಯ್ದುಕೊಂಡಿರುವ ರಾಜ್ಯ ಸರ್ಕಾರ: ಹೆಚ್.ಡಿ.ಕೆ.ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಪಂಚಮಸಾಲಿ ಬಂಧುಗಳ ಹೋರಾಟವನ್ನು ಹತ್ತಿಕ್ಕಲು ರಾಜ್ಯ ಕಾಂಗ್ರೆಸ್ ಸರಕಾರ ಅಡಾಲ್ಫ್ ಹಿಟ್ಲರ್ ಮಾರ್ಗವನ್ನು ಆಯ್ಕೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ. ಸಂತರು, ಪಂಚಮಸಾಲಿ ಸಮುದಾಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಬಸವ ಮೃತ್ಯುಂಜಯ ಮಹಾಸ್ವಾಮೀಜಿಗಳನ್ನು ಅತ್ಯಂತ ಹೇಯವಾಗಿ ನಡೆಸಿಕೊಂಡಿರುವುದು ನನಗೆ ಅತೀವ ನೋವುಂಟು ಮಾಡಿದೆ. ಇದು ಶಿಲಾಯುಗ ಕಾಲದ ಮನಃಸ್ಥಿತಿಯ ಸರಕಾರ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮ್ಮ ಬೇಡಿಕೆಗಳ ಬಗ್ಗೆ ಪೂಜ್ಯ ಸ್ವಾಮೀಜಿ ಅವರು, ಸಮುದಾಯದ ಪ್ರಮುಖರು ನಿರಂತರವಾಗಿ ಸರಕಾರಕ್ಕೆ ಮನವಿ ಮಾಡುತ್ತಲೇ ಇದ್ದರು. ಆದರೂ ಸರಕಾರ ಕಿವುಡಾಗಿತ್ತು, ನಿರ್ಲಕ್ಷ್ಯ ವಹಿಸಿತ್ತು. ಶಾಂತಿಯುತವಾಗಿ ಪ್ರತಿಭಟಿಸಲು ಬಂದ ಸ್ವಾಮೀಜಿಗಳು, ಸಮುದಾಯದ ನಾಯಕರು, ಜನತೆಯ ಮೇಲೆ ದಬ್ಬಾಳಿಕೆ ನಡೆಸಿ ಪೊಲೀಸ್ ವಶಕ್ಕೆ ತೆಗೆದುಕೊಂಡ ಕ್ರಮ ಖಂಡನೀಯ.

Home add -Advt

ಸರಕಾರವೇ ಶಾಂತಿ ಕದಡುವ ದುಷ್ಪ್ರಯತ್ನ ಮಾಡಿದರೆ ಅದಕ್ಕೆ ಸರಕಾರವೇ ಪೂರ್ಣ ಹೊಣೆ. ಕೂಡಲೇ ಪೂಜ್ಯ ಸ್ವಾಮೀಜಿ ಅವರ ಹಾಗೂ ಸಮುದಾಯದ ಕ್ಷಮೆ ಕೇಳಬೇಕು ಹಾಗೂ ಅವರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ತುರ್ತು ಕ್ರಮ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

Related Articles

Back to top button