*ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ: ಸಂಪುಟ ಸಭೆಯ ನಂತರ ಮಾಹಿತಿ*

ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ಮಾರ್ಚ್ 24 ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯ ನಂತರ ಪಂಚಮಸಾಲಿಗಳಿಗೆ 2 ಎ ಮೀಸಲಾತಿ ನೀಡುವ ಬಗ್ಗೆ ಮಾಹಿತಿ ಸಿಗಲಿದೆ ಎಂದು ಮುಖ್ಯಮಂತ್ರಿ. ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಮುಧೋಳದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಕಳೆದ ಮೂರು ವರ್ಷಗಳಲ್ಲಿ ನೀರಾವರಿ, ಕುಡಿಯುವ ನೀರು, ರೈತರಿಗೆ ಅನುಕೂಲವಾಗುವ ಯೋಜನೆ, ಕೈಗಾರಿಕಾ ಅಭಿವೃದ್ಧಿ ಹಾಗೂ ಗ್ರಾಮೀಣ ಪ್ರದೇಶಗಳ ಮೂಲಭೂತ ಸೌಲಭ್ಯಗಳಿಗೆ ಒಟ್ಟು ನೀಡಲಾಗಿದೆ. ಹುನಗುಂದ ಮತ್ತು ಮುಧೋಳದಲ್ಲಿ ವಿವಿಧ ಕಟ್ಟಡಗಳ ಉದ್ಘಾಟನೆ ಮಾಡಲಾಗಿದೆ. ಮುದ್ದೇಬಿಹಾಳ ಕ್ಷೇತ್ರದಲ್ಲಿ 1600 ಕೋಟಿ ರೂ.ಗಳ ಅಭಿವೃದ್ಧಿ ಮಾಡಲಾಗುತ್ತಿದೆ ಎಂದರಲ್ಲದೇ ಕಳೆದ ಮೂರು ವರ್ಷಗಳ ಸರ್ಕಾರದ ನಿರ್ಣಯ, ಬಿಡುಗಡೆ ಮಾಡಿರುವ ಅನುದಾನ ಮತ್ತು ಅನುಷ್ಠಾನದ ಫಲವಾಗಿ ಇದಾಗುತ್ತಿದೆ. ನಮ್ಮ ಕೆಲಸಗಳು ಮಾತನಾಡಬೇಕು ಎಂದರು.

ವೇತನ ಹೆಚ್ಚಳ
ಆರೋಗ್ಯ ಇಲಾಖೆ ಹೊರಗುತ್ತಿಗೆ ನೌಕರರು ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಉತ್ತರಿಸಿ ಈಗಾಗಲೇ ಅವರಿಗೆ 15 ರಷ್ಟು ವೇತನ ಹೆಚ್ಚಳ ಮಾಡಲಾಗಿದೆ ಎಂದರು.

Home add -Advt

2 ಎ ಸಮುದಾಯಗಳನ್ನು 3 ಬಿ ಗೆ ಹಾಕುವ ಬಗ್ಗೆ ಯಾವುದೇ ವರದಿ ಇಲ್ಲ ಎಂದರು.

Related Articles

Back to top button