ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪಂಚಮಸಾಲಿ ಸಮಾಜದವರು 2ಎ ಮೀಸಲಾತಿಗಾಗಿ ಆಗ್ರಹಿಸಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಸುತ್ತಿರುವ ಮತ್ತೊಂದು ಸುತ್ತಿನ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿರುವ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿ ಸಮಾಜ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದೆ. 2ಎ ಮೀಸಲಾತಿಗಾಗಿ ಆಗ್ರಹಿಸಿ ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡುತ್ತಿದ್ದೇವೆ. ಸರ್ಕಾರ ಮಾತಿಕೆ ತಪ್ಪುತ್ತಲೇ ಇದೆ. ನಮ್ಮ ಹೋರಾಟ ಇನ್ನಷ್ಟು ತೀವ್ರಗೊಳಿಸುತ್ತಿದ್ದೇವೆ ಎಂದರು.
ಜನವರಿ ಅಂತ್ಯದಲ್ಲಿ ಹುಬ್ಬಳ್ಳಿ ಅಥವಾ ಶಿಕಾರಿಪುರದಲ್ಲಿ ಪಂಚಮಸಾಲಿ ಸಮಾಜ ಶಕ್ತಿ ಪ್ರದರ್ಶನ ಮಾಡಲು ನಿರ್ಧರಿಸಿದ್ದೇವೆ. ಈ ಮೂಲಕ ಸರ್ಕಾರಕ್ಕೆ ಮತ್ತೆ ಬಿಸಿ ಮುಟ್ಟಿಸುತ್ತೇವೆ ಎಂದು ಹೇಳಿದರು. ಇಂದು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದು ನಮ್ಮ ಬೇಡಿಕೆ ಹಾಗೂ ಸಮಸ್ಯೆಗಳ ಬಗ್ಗೆ ವಿವರಿಸುತ್ತೇವೆ ಎಂದು ಹೇಳಿದರು.
ಇದೇ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ನೋಟೀಸ್ ವಿಚಾರವಾಗಿ, ಯತ್ನಾಳ್ ಗೆ ಯಾವುದೇ ನೋಟಿಸ್ ಬಂದಿಲ್ಲ. ಈ ಬಗ್ಗೆ ಯತ್ನಾಳ್ ಅವರೇ ನಿನ್ನೆ ಸ್ಪಷ್ಟ ಪಡಿಸಿದ್ದಾರೆ. ಯತ್ನಾಳ್ ಯಾವುದೇ ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ, ಹಾಗೊಂದು ವೇಳೆ ನೋಟೀಸ್ ನೀಡಿದರೆ ಇಡೀ ಸಮುದಾಯ ಅವರ ಪರ ನಿಲ್ಲುತ್ತದೆ. ನಾವೆಲ್ಲರೂ ಯತ್ನಾಳ್ ಪರ ಇದ್ದೇವೆ ಎಂದು ಹೇಳಿದರು.
*ಜನವರಿ 19ಕ್ಕೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಧಾನಿ ಮೋದಿ ಪ್ರವಾಸ; ಸಂಚಾರ ಮಾರ್ಗ ಬದಲಾವಣೆ*
https://pragati.taskdun.com/pm-narendra-modikalyana-karnatakakalaburgiyadagiri-visit/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ