Belagavi NewsBelgaum NewsKannada NewsKarnataka NewsLatest

*ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಆರ್.ಕೆ.ಪಾಟೀಲ ನಿಧನ ; ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಪಂಚಮಸಾಲಿ ಸಮಾಜದ ಬೆಳಗಾವಿ ಜಿಲ್ಲಾ ಅಧ್ಯಕ್ಷ ಆರ್.ಕೆ.ಪಾಟೀಲ ನಿಧನರಾಗಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು.

ಚಿಕ್ಕೋಡಿ ತಾಲೂಕಿನ ಡೋಣವಾಡದವರಾಗಿದ್ದ ಆರ್.ಕೆ. ಪಾಟೀಲ ವೃತ್ತಿಯಲ್ಲಿ ವಕೀಲರಾಗಿದ್ದರು. ಪಂಚಮಸಾಲಿ ಸಮಾಜದ ಮೀಸಲಾತಿ ಹೋರಾಟಗಳಲ್ಲಿ ಸಕ್ರೀಯವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಅಲ್ಪ ಕಾಲದ ಅನಾರೋಗ್ಯದ ನಂತರ ಅವರು ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಬೆಳಗ್ಗೆ ನಿಧನರಾದರು. ಅವರಿಗೆ ಪತ್ನಿ, ಒಂದು ಗಂಡು ಹಾಗೂ ಒಂದು ಹೆಣ್ಣು ಮಕ್ಕಳಿದ್ದಾರೆ. ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಡೋಣವಾಡದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

Home add -Advt

ಸಂತಾಪ

ಆರ್.ಕೆ.ಪಾಟೀಲ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮತ್ತು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ನಿಧನದಿಂದಾಗಿ ಸಮಾಜಕ್ಕೆ ದೊಡ್ಡ ನಷ್ಟವಾಗಿದೆ. ಅವರ ಕುಟುಂಬಕ್ಕೆ ಅವರ ನಿಧನದ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Related Articles

Back to top button