Belagavi NewsBelgaum NewsKarnataka NewsLatest

*2ಎ ಮೀಸಲಾತಿ ವಿಚಾರ: ಪಂಚಮಸಾಲಿ ಸಮುದಾಯದೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆಗೆ ಒತ್ತಾಯಿಸಿ ವಿಧಾನಸೌಧದ ಎದುರು ಧರಣಿ*

ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿಕೆ

ಪ್ರಗತಿವಾಹಿನಿ ಸುದ್ದಿ: ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಮಾತಿನಂತೆ ನಮ್ಮ ಸಮಾಜದವರೊಂದಿಗೆ ಸಭೆ ನಡೆಸಬೇಕೆಂದು ಅ.18 ರಂದು ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ಕುಳಿತುಕೊಳ್ಳಲಾಗುವುದು ಪಂಚಮಸಾಲಿ ಸಮಾಜದ ಬಾಂಧವರು ಆಗಮಿಸಬೇಕೆಂದು ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.


ಸೋಮವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಅ.18 ರಂದು ಪಂಚಮಸಾಲಿಯ ಎಲ್ಲ ಸಮಾಜದ ಪದಾಧಿಕಾರಿಗಳು ಬೆಂಗಳೂರಿಗೆ ಆಗಮಿಸಬೇಕು. ನೀವು ದೆಹಲಿಗೆ ಹೋಗಿ ಬಂದ ಮೇಲೆ ನಮ್ಮ ಸಮಾಜಕ್ಕೆ ಮೀಸಲಾತಿ ಕೊಡುವ ಕುರಿತು ಸಭೆ ನಡೆಸಲು ದಿನಾಂಕ ಮತ್ತು ಸ್ಥಳ ನಿಗದಿ ಪಡಿಸಬೇಕೆಂದರು‌.


ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ಸಿಗುವ ನಿಟ್ಟಿನಲ್ಲಿ ಏಳು ಹಂತದಲ್ಲಿ ಹೋರಾಟ ಮಾಡಲಾಗಿದೆ. ಆದರೆ ಕಳೆದೊಂದು‌ ವರ್ಷದಿಂದ ಸರಕಾರ ನಮ್ಮ‌ ಹೋರಾಟಕ್ಕೆ ನ್ಯಾಯ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.


ಸೆ.22 ರಂದು ವಕೀಲರ ರಾಜ್ಯಮಟ್ಟದ ಸಮಾವೇಶದಲ್ಲಿ ಅಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅ‌ .15ಕ್ಕೆ ದೂರವಾಣಿ ಕರೆ ಮಾಡಿ ಸಭೆ ನಡೆಸುವುದಾಗಿ ಭರವಸೆ ನೀಡಿದ್ದರು. ಜಿಲ್ಲಾಧಿಕಾರಿಗಳು ಆಗಮಿಸಿ ಪ್ರತಿಭಟನೆ ನಡೆಸದಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ನಾವು ಹೋರಾಟ ಹಿಂಪಡೆದಿದ್ದೇವು ಎಂದರು.


ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಚೇರಿಯಿಂದ ಇಲ್ಲಿಯವರೆಗೂ ಯಾವುದೇ ಸಭೆಯ ಕುರಿತು ಮಾಹಿತಿ ಬಂದಿಲ್ಲ. ಮುಖ್ಯಮಂತ್ರಿಗಳು ನೀವು ಕೊಟ್ಟ ಮಾತಿನಂತೆ ನಡೆದುಕೊಳ್ಳಿ. ನಿನ್ನೆ ಸವದತ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ್ ಅವರ ಗಮನಕ್ಕೆ ತಂದಿದ್ದಾರೆ ಎಂದು ತಿಳಿದು ಬಂದಿದೆ ಎಂದರು.
ಪಂಚಮಸಾಲಿ ಸಮಾಜದ ಆರ್.ವಿ‌. ಪಾಟೀಲ್, ಶಿವಾನಂದ ತುಬಾಕಿ, ರಾಜು ಮಗದುಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button