Kannada NewsLatest

*ಸುವರ್ಣ ವಿಧಾನಸೌಧದ ಸುತ್ತ ಬಿಗಿ ಭದ್ರತೆ; 1000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಪಂಚಮಸಾಲಿ ಸಮುದಾಯದವರು 2ಎ ಮೀಸಲಾತಿಗೆ ಆಗ್ರಹಿಸಿ ಹೋರಾಟ ನಡೆಸುತ್ತಿದ್ದು, ಒಂದು ವೇಳೆ ಮೀಸಲಾತಿ ಘೋಷಿಸದಿದ್ದರೆ ಇಂದು ಬೆಳಗಾವಿಯ ಸುವರ್ಣ ವಿಧಾನಸೌಧ ಮುತ್ತಿಗೆ ಹಾಕುವುದಾಗಿ ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸುವರ್ಣ ವಿಧನಸೌಧದ ಸುತ್ತ ಬಿಗಿ ಪೊಲಿಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಬೆಳಗಾವಿ ಬಸವೇಶ್ವರ ವೃತ್ತಕ್ಕೆ ಭೇಟಿ ನೀಡಿ ಪೊಲೀಸ್ ಭದ್ರತೆ ಪರಿಶೀಲಿಸಿದ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ, ಪಾದಯಾತ್ರೆಯುದ್ಧಕ್ಕೂ ಡ್ರೋಣ್ ಕಣ್ಗಾವಲು ಇಡುವಂತೆ ಸೂಚಿಸಿದ್ದಾರೆ.

ಬೆಳಗಾವಿ ನಗರದಲ್ಲಿ 1500 ಪೊಲೀಸರನ್ನು ನಿಯೋಜಿಸಲಾಗಿದ್ದು, ಸುವರಣಸೌಧದ ಸುತ್ತ 1000 ಪೊಲೀಸರನ್ನು ನಿಯೋಜಿಸಲಾಗಿದೆ. 2000 ಹೆಚ್ಚುವರಿ ಪೊಲೀಸರನ್ನು ಕರೆಸಿಕೊಳ್ಳಲಾಗಿದೆ. ಪಂಚಮಸಾಲಿ ಸಮುದಾಯದ ಹೋರಾಟ ಹಿನ್ನೆಲೆಯಲ್ಲಿ ಬೆಳಗಾವಿಯಾದ್ಯಂತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

*ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಮಧ್ಯಂತರ ವರದಿ ಸಲ್ಲಿಕೆ*

https://pragati.taskdun.com/submission-interim-reportkarnataka-state-backward-classes-commission/

Related Articles

Back to top button